ಬೆಂಗಳೂರು: ರಾಜ್ಯಪಾಲ ಎಂಬುದು ಒಂದು ಸಾಂವಿಧಾನಿಕ ಹುದ್ದೆ. ರಾಜ್ಯಪಾಲರಿಗೆ ಗೌರವ ನೀಡುವುದು ಸಂವಿಧಾನಕ್ಕೆ ಗೌರವ ನೀಡಿದಂತೆ. ಆದರೆ ಇದಾವುದನ್ನೂ ಪರಿಗಣಿಸದೆ ಲೋಕಲ್ ರೌಡಿಯ ರೀತಿ ಆವಾಜ್ ಹಾಕಿರುವುದು ಅತ್ಯಂತ ಖಂಡನೀಯ ಎಂದು ಬಿಜೆಪಿ ಆರೋಪಿಸಿದೆ.
ಸದನದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಿಳಿಯದ ರೌಡಿ ಬಿ.ಕೆ. ಹರಿಪ್ರಸಾದ್ರನ್ನು ಸದನದಿಂದ ಕೂಡಲೇ ಅಮಾನತು ಮಾಡಬೇಕೆಂದು ನಾವು ಆಗ್ರಹಿಸುತ್ತೇವೆ ಎಂದು ಬಿಜೆಪಿ ಟ್ವೀಟ್ ನಲ್ಲಿ ಕಿಡಿಕಾರಿದೆ.



