ಬೆಂಗಳೂರು: ಈ ತಿಂಗಳ 8ರ ವೇಳೆಗೆ ಬಿಜೆಪಿ ಪಕ್ಷದ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿಯವರು ಹೇಳಿದ್ದಾರೆ.
ಈಗಾಗಲೇ ನಿನ್ನೆ ಮೊನ್ನೆ ಜಿಲ್ಲಾ ಮಟ್ಟದ ಕೋರ್ ಕಮಿಟಿ ಸಭೆ ನಡೆದಿದ್ದು, ನಾಳೆ ಮತ್ತು ನಾಳಿದ್ದು ರಾಜ್ಯ ಮಟ್ಟದ ಕೋರ್ ಕಮಿಟಿ ಸಭೆ ನಡೆದು ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಸಂಸದೀಯ ಮಂಡಳಿಗೆ ಶಿಫಾರಸು ಮಾಡಲಿದೆ. ಈ ತಿಂಗಳ 8 ರಂದು ಕೇಂದ್ರ ಸಂಸದೀಯ ಮಂಡಳಿಯ ಸಭೆ ನಡೆದು ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ದಪಡಿಸಿ ಬಿಡುಗಡೆ ಮಾಡಲಿದೆ ಎಂದರು.
Leave a Review