ದೆಹಲಿ: ಸಂಸತ್ನಲ್ಲಿಂದು ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಸಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ಚರ್ಚೆ ನಡೆದಿದೆ. ಸಭೆಯಲ್ಲಿ ಸಚಿವರಾದ ಅಮಿತ್ಶಾ, ಪ್ರಹ್ಲಾದ್ ಜೋಷಿ ಮತ್ತಿತರ ಪ್ರಮುಖರು ಪಾಲ್ಗೊಂಡಿದ್ದರು.
ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಆಯ್ಕೆ ಸಂಬಂಧ ಈ ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ.ಇದೇ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ.
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ಸಂಸದೀಯ ಪಕ್ಷದ ಮೊದಲ ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಸೇರಿದಂತೆ ಹಿರಿಯ ನಾಯಕರು ಮೋದಿ ಅವರನ್ನು ಅಭಿನಂದಿಸುತ್ತಿದ್ದಂತೆ ಪಕ್ಷದ ಸಂಸದರು ಅವರ ನಾಯಕತ್ವವನ್ನು ಶ್ಲಾಘಿಸಿ ಘೋಷಣೆಗಳನ್ನು ಕೂಗಿದರು.
ಮೂರು ರಾಜ್ಯಗಳಾದ ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನಕ್ಕೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.ಮೋದಿಯವರ ನಾಯಕತ್ವವೇ ಅವರ ದೊಡ್ಡ ಗೆಲುವಿಗೆ ಪ್ರಮುಖ ಕಾರಣ ಎಂದು ಹೇಳಲಾಗಿದೆ.