ಬಂಗಾರಪೇಟೆ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ (85) ಅವರು ಜು.18 ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ ಅವರ ಕುಟುಂಬಕ್ಕೆ ಈ ದುಃಖ ವನ್ನು ಬರಿಸುವ ಶಕ್ತಿ ದೇವರು ನೀಡಲಿ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎ ಮಹೇಶ್ ಸಂತಾಪ ಸೂಚಿಸಿದರು.ನಗರದ ಕುವೆಂಪು ವೃತ್ತದಲ್ಲಿ ಚೆನ್ನಮ್ಮರವರಿಗೆ ಶ್ರದ್ದಾಂಜಲಿ ಸಲ್ಲಿಸಿ ಪುಷ್ಪಾರ್ಚನೆಯನ್ನು ನೆರವೇರಿಸಿ ಮಾತನಾಡಿದ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಧರ್ಮಪತ್ನಿ ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ಚೆನ್ನಮ್ಮ ಅವರು 1954 ಮೇ 25ರಂದು ಹೆಚ್.ಡಿ. ದೇವೇಗೌಡರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ದಂಪತಿಗೆ 6 ಜನ ಮಕ್ಕಳಿದ್ದಾರೆ ಸುದೀರ್ಘ 72 ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ್ದ ಚೆನ್ನಮ್ಮನವರು, ದೇವೇಗೌಡರ ರಾಜಕೀಯ ಏಳು-ಬೀಳುಗಳಲ್ಲಿ ಸದಾ ಬೆನ್ನೆಲುಬಾಗಿ ನಿಂತು ಆದರ್ಶ ಗೃಹಿಣಿಯಾಗಿ ಎಲ್ಲರ ಗೌರವಕ್ಕೆ ಪಾತ್ರ ರಾಗಿದ್ದರು ಎಂದು ಹೇಳಿದರು.ಚೆನ್ನಮ್ಮರವರಿಗೆ ದೇಶದ ಎಲ್ಲಾ ಮುಖ್ಯ ಮಂತ್ರಿಗಳು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ ಅದರಂತೆ ಬಂಗಾರಪೇಟೆ ನಗರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಿಂದ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇವೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಸಂಪAಗಿ ರೆಡ್ಡಿ, ಜೆಡಿಎಸ್ ತಾಲೂಕು ಅಧ್ಯಕ್ಷ ಬಾಲಕೃಷ್ಣ, ಗ್ರಾಪಂ ಮಾಜಿ ಸದಸ್ಯ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಚ್.ಆರ್ ಶ್ರೀನಿವಾಸ್, ಜೆಡಿಎಸ್ ತಾಲೂಕು ಮಾಜಿ ಅಧ್ಯಕ್ಷ ದೇವರಾಜ್, ಸತೀಶ್ ಕುಮಾರ್, ಬಾಬು, ಮಂಜುನಾಥ್, ಎಲ್ಲಪ್ಪ, ಹನುಮಪ್ಪ, ಶಿವಕುಮಾರ್, ಕೃಷ್ಣ, ಮಹೇಶ್, ಶಿವು, ಚಂದ್ರಪ್ಪ ಇದ್ದರು.



