ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜ್ಯಾತೀತ ಪ್ರಕರಣಕ್ಕೆ ಸಂಬAಧಪಟ್ಟAತೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ಪ್ರತಿಭಟನೆ ನಡೆಸುತ್ತಿದೆ.
ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯ ಖಂಡಿಸಿ ಮುತ್ತಿಗೆ ಹಾಕಲು ಬಿಜೆಪಿ ಸಿದ್ಧತೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸ ಹಾಗೂ ಗೃಹಕಚೇರಿ ಕೃಷ್ಣಬಳಿ ಪೊಲೀಸರ ಬಿಗಿ ಭದ್ರತೆ ನಿಯೋಜನೆಗೊಳಿಸಲಾಗಿದೆ. ಒಂದು ಕೆ ಎಸ್ ಆರ್ ಪಿ ತುಕಡಿ ಸೇರಿದಂತೆ ೮೦ಕ್ಕೂ ಹೆಚ್ಚು ಪೋಲಿಸರಿಂದ ಭದ್ರತೆ ಒದಗಿಸಲಾಗಿದೆ.
ಕುಮಾರ ಕೃಪ ಗೆಸ್ಟ್ ಹೌಸ್ ಬಳಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಿದ್ದಾರೆ. ವಶಕ್ಕೆ ಪಡೆದು ಎರಡು ಬಿಎಂಟಿಸಿ ಬಸ್ಗಳಲ್ಲಿ ಸಾಗಿಸಲು ವ್ಯವಸ್ಥೆ ಸಹ ಮಾಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿಪಕ್ಷ ನಾಯಕ ಆರ್ ಅಶೋಕ್, ಎಂಎಲ್ಸಿ ಸಿಟಿ ರವಿ ಎನ್ ರವಿಕುಮಾರ್, ಚಲವಾದಿ ನಾರಾಯಣ ಸ್ವಾಮಿ, ಶಾಸಕರಾದ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ, ಉದಯ್ ಗರುಡಾಚಾರ್, ಶಾಸಕರಾದ ಕೆ. ಗೋಪಾಲಯ್ಯ ಸೇರಿದಂತೆ ಶಿವಾನಂದ್ ಸರ್ಕಲ್ ನಿಂದ ಬಿಜೆಪಿ ನಾಯಕರು ಪ್ರತಿಭಟನೆ ಆರಂಭಿಸಿದರು. ಈ ವೇಳೆ ಸಿಎಂ ನಿವಾಸಕ್ಕೆ ಆಗಮಿಸುತ್ತಿದ್ದಂತೆ ಪೊಲೀಸರು ಪ್ರತಿಭಟನಾ ನಿರತ ಬಿಜೆಪಿ ನಾಯಕರನ್ನು ವಶಕ್ಕೆ ಪಡೆದು, ಬಳಿಕ ಬಿಎಂಟಿಸಿ ಬಸ್ನಲ್ಲಿ ಬಿಜೆಪಿ ನಾಯಕರನ್ನು ಕರೆದೊಯ್ದರು.



