ಬೆಂಗಳೂರು: ಕೇರಳದ ಕನ್ನಡ ಶಾಲೆಗಳಲ್ಲಿ ಮಲೆಯಾಳಂ ಕಡ್ಡಾಯ ಗೊಳಿಸುವ ಕೇರಳದ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ತೀವ್ರವಾಗಿ ಖಂಡಿಸಿದೆ.
ಈ ಸಂಬAಧ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇರಳ ಸರ್ಕಾರ ಕಾಂಗ್ರೆಸ್ ಮೂಲಕ ಕಮ್ಯುನಿಸ್ಟ್ ಸಿದ್ಧಾಂತವನ್ನು ಹೇರಲು ಹೊರಟಿದೆ.
ಕಾಂಗ್ರೆಸ್ನ ಕೆ.ಸಿ.ವೇಣುಗೋಪಾಲ್ ಮುಖಾಂತರ ಈ ಕೆಲಸ ಮಾಡಲು ಹೊರಟಿರುವ ಕೇರಳ ಸರ್ಕಾರದ ನಿರ್ಧಾರವನ್ನು ರಾಜ್ಯ ಸರ್ಕಾರ ತೀವ್ರವಾಗಿ ಖಂಡಿಸಿ ವಾಪಸ್ ಪಡೆಯಲು ಒತ್ತಾಯಿಸಬೇಕು ಎಂದು ಆಗ್ರಹಪಡಿಸಿದರು.
ಮಲೆಯಾಳಂ ಶಾಲೆಗಳಲ್ಲಿ ಮಲೆಯಾಳಂ ಕಡ್ಡಾಯ ಮಾಡಿಕೊಳ್ಳಲಿ. ಆದರೆ ಕನ್ನಡ ಶಾಲೆಗಳಲ್ಲಿ ಮಲೆಯಾಳಂ ಕಡ್ಡಾಯ ಗೊಳಿಸಿರುವುದನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ. ಇದನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಇದೇ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ಕೇರಳ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದು, ಸಿದ್ದರಾಮಯ್ಯ ಬರೀ ಪತ್ರ ಬರೆದರೆ ಸಾಲದು ಮಲೆಯಾಳಂ ಕಡ್ಡಾಯದ ನಿರ್ಧಾರವನ್ನು ವಾಪಸ್ ಪಡೆಯಲು ಒತ್ತಾಯ ಹೇರಬೇಕು ಎಂದಿದ್ದಾರೆ.



