ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಡಾ.ಸಿ.ಎನ್.ಮಂಜುನಾಥ್ಗೆ ಬಹುತೇಕ ಖಚಿತವಾಗಿ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಹಾಗೂ ಹೆಚ್ಡಿಡಿ ಅಳಿಯ ಡಾ.ಸಿ.ಎನ್.ಮಂಜುನಾಥ್.
ಇಂದು ದೆಹಲಿಯಲ್ಲಿ ನಡೆಯಲಿರುವ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿಯೇ ಡಾ.ಸಿ.ಎನ್. ಮಂಜುನಾಥ್ ಅವರ ಹೆಸರನ್ನು ಬಿಜೆಪಿ ನಾಯಕರುಗಳು ಅಂತಿಮಗೊಳಿಸಲಿದ್ದಾರೆ.ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಡಿ.ಕೆ.ಸುರೇಶ್ ಹೆಸರು ಘೋಷಣೆಯಾಗಿದ್ದು, ಡಿ.ಕೆ.ಸುರೇಶ್ ಹಾಗೂ ಡಿ.ಕೆ. ಶಿವಕುಮಾರ್ ಅವರನ್ನು ಕಟ್ಟಿ ಹಾಕಲು ಅದೇ ಸಮುದಾಯದ, ಸಮಾಜಮುಖಿ ಕಾರ್ಯಗಳನ್ನು ಮಾಡಿರುವ ಡಾ.ಸಿ.ಎನ್. ಮಂಜುನಾಥ್ಗೆ ಮಣೆ ಹಾಕಲಿದೆ. ಇವರಿಗೆ ಟಿಕೆಟ್ ನೀಡುವುದರಿಂದ ಬಿಜೆಪಿಗೆ ಲಾಭವೇ ಹೆಚ್ಚು.
ಡಾ.ಸಿ.ಎನ್.ಮಂಜುನಾಥ್ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ನಿರ್ದೇಶಕರಾಗಿ 16 ವರ್ಷಗಳ ಕಾಲ ಸೇವೆ, ಬಡವರಿಗೆ ಹಾಗೂ ಮಧ್ಯಮ ವರ್ಗದವರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡುತ್ತಾ, ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿರುವ ಹಿರಿಮೆ. ಬೆಂಗಳೂರು ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ ಭಾಗದಲ್ಲೂ ಡಾ.ಸಿ.ಎನ್. ಮಂಜುನಾಥ್ ಚಿರಪರಿಚಿತ. ಪ್ರಬಲ ಒಕ್ಕಲಿಗ ಸಮುದಾಯಕ್ಕೆ ಸೇರಿದ ಮಂಜುನಾಥ್, ಹೆಚ್ಡಿಡಿ ಕುಟುಂಬಕ್ಕೆ ಸೇರಿದವರು.
ಡಿ.ಕೆ.ಬ್ರದರ್ಸ್ ಪ್ರಾಬಲ್ಯವಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಂಜುನಾಥ್ರನ್ನು ಕಣಕ್ಕಿಳಿಸಿದ್ರೆ, ಬಿಜೆಪಿಗೆ ಪ್ಲಸ್. ಇನ್ನು ಇದರ ಜೊತೆಗೆ ಸ್ವಯಂ ವರ್ಚಸ್ಸು, ವಿದ್ಯಾರ್ಹತೆ ಇರುವ ಮಂಜುನಾಥ್ಗೆ ಮಣೆ ಹಾಕಿದ್ದೇವೆ ಎಂಬ ವಿಚಾರ ಮೂರ್ನಾಲ್ಕು ಕ್ಷೇತ್ರಗಳ ಮೇಲೆ ಬೀರುವ ಪರಿಣಾಮ. ಇದರ ಜೊತೆಗೆ ಜೆಡಿಎಸ್ ಬಿಟ್ಟು ಅಂದರೆ ಕುಟುಂಬ ರಾಜಕಾರಣ ಹೊರತುಪಡಿಸಿ, ಬಿಜೆಪಿ ಚಿಹ್ನೆಯಡಿಯಲ್ಲಿ ಕಣಕ್ಕಿಳಿಸುವ ಮೂಲಕ ಹೊಸಮುಖದ ಅಭ್ಯರ್ಥಿಗೆ ಮಣೆ ಹಾಕಿದ್ದೇವೆ ಎಂಬ ಸಂದೇಶ ರವಾನೆಯಾಗಿದೆ.ಹೀಗೆ ಸಾಲು ಸಾಲು ಕಾರಣಗಳನ್ನು ಮುಂದಿಟ್ಟುಕೊಂಡು ಡಾ.ಸಿ.ಎನ್. ಮಂಜುನಾಥ್ ಹೆಸರನ್ನು ಅಂತಿಮ ಮಾಡಲು ಬಿಜೆಪಿ ಹೈಕಮಾಂಡ್ ನಾಯಕರು ಮುಂದಾಗಿದ್ದಾರೆ.