ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಮಂಡ್ಯದಲ್ಲಿ ಜು.31 ರಂದು ಬೃಹತ್ ಹೋರಾಟ ನಡೆಯಲಿದೆ. ಆ ಭಾಗದ ರೈತರು, ರೈತ ಸಂಘಟನೆಗಳು ಬೆಂಬಲ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮನವಿ ಮಾಡಿದರು.
ನಗರದ ಬೆಕ್ಕಿನಕಲ್ಮಠದಲ್ಲಿ ಗುರುಪೂರ್ಣಿಮೆಯ ಸಲುವಾಗಿ ಭೇಟಿ ನೀಡಿದ್ದರು. ಈ ವೇಳೆ ಕಾವೇರಿ ನೀರು ನಿರ್ವಾಹಣಾ ಸಮಿತಿ ತೀರ್ಪು ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಆ ತೀರ್ಪು ಕಾವೇರಿ ಕೊಳ್ಳದ ರೈತರಿಗೆ ಬರೆ ಎಳೆದಂತೆ ಆಗಿದೆ. ಬರ ಪರಿಸ್ಥಿತಿ ಇದೆ, ಯಾರು ಕೂಡ ಬೆಳೆ ಬೆಳೆಯಬೇಡಿ ಎಂದು ಸಿಎಂ ಕೆಲವು ದಿನದ ಹಿಂದೆ ಕರೆ ಕೊಟ್ಟಿದ್ದರು ಎಂದು ಮಾಹಿತಿ ನೀಡಿದರು.ರಾಜ್ಯದ ರೈತರಿಗೆ ಸಿಎಂ ಧೈರ್ಯ ತುಂಬಬೇಕಿತ್ತು. ಅವರು ಆತ್ಮಸ್ಥೆರ್ಯ ಕುಗ್ಗಿಸುವ ಕೆಲಸ ಮಾಡುತ್ತಾರೆ. ಜೊತೆಗೆ ಕದ್ದುಮುಚ್ಚಿ ರಾತ್ರೋರಾತ್ರಿ ನೀರು ಬಿಡುವ ಕೆಲಸ ಆಗಿತ್ತು. ತಮಿಳುನಾಡಿನ ಮುಖ್ಯಮಂತ್ರಿಗಳನ್ನು ಖುಷಿ ಪಡಿಸಲು ರಾಜ್ಯದ ರೈತರಿಗೆ ಸಿಎಂ ಅನ್ಯಾಯ ಮಾಡಿದ್ದರು. ಯಾಕೇ ಇಂತಹ ಕಪಟ ನಾಟಕ ಮಾಡ್ತೀದ್ದೀರಿ ಎಂದು ಡಿ.ಕೆ ಶಿವಕುಮಾರ್ ಅವರ ವಿರುದ್ಧ ಅಸಮಾಧಾನ ಹೊಹಾಕಿದರು.ಡ್ಯಾಂನಲ್ಲಿ 17.39 ಟಿಎಂಸಿ ನೀರು ಸಂಗ್ರಹವಿದೆ. ಅದರಲ್ಲಿ 5 ಟಿಎಂಸಿ ಡೆಡ್ ಸ್ಟೋರೇಜ್. ಉಳಿದಂತ 12-13 ಟಿಎಂಸಿ ನೀರಲ್ಲಿ ತಮಿಳುನಾಡಿಗೆ ಬಿಟ್ಟರೇ ರಾಜ್ಯದ ರೈತರ ಗತಿಯೇನು ಸಿಎಂ ಯಾಕೇ ಆ ಭಾಗದ ರೈತರ ಜೊತೆ ಚೆಲ್ಲಾಟ ಆಡ್ತಿದ್ದಾರೆ. ಸಮಿತಿ ಮುಂದೆ ಸರಿಯಾದ ರೀತಿ ವಾದ ಮಾಡಬೇಕು ಎಂದು ಆಗ್ರಹಿಸಿದರು.
ಜು.31 ರಂದು ಮಂಡ್ಯದಲ್ಲಿ ಬಿಜೆಪಿ ಬೃಹತ್ ಹೋರಾಟ: ವಿಜಯೇಂದ್ರ



