ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ 2024 ಗಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡುವ ಸಾಧ್ಯತೆಯಿದೆ.
ಪಕ್ಷದ ಉನ್ನತ ಮೂಲಗಳು ಈ ಬಗ್ಗೆ ತಿಳಿಸಿದ್ದು, ಇಂದು ಪತ್ರಿಕಾಗೋಷ್ಠಿ ನಡೆಸುವ ಪಕ್ಷದ ಪ್ರಮುಖರು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಹಿರಂಗ ಪಡಿಸುವ ನಿರೀಕ್ಷೆಯಿದೆ.ಆರಂಭಿಕ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಇರಲಿದೆ ಎಂದು ಪಕ್ಷದ ಹತ್ತಿರದ ಮೂಲಗಳು ತಿಳಿಸಿವೆ.
ಇದಲ್ಲದೆ, ಗೃಹ ಸಚಿವ ಅಮಿತ್ ಶಾ ಅವರ ಹೆಸರು ಕೂಡ ಈ ಪಟ್ಟಿಯಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ ಎನ್ನಲಾಗಿದೆ. ತಡರಾತ್ರಿಯವರೆಗೂ ಪಕ್ಷದ ಪ್ರಮುಖರೊಂದಿಗೆ ಪ್ರಧಾನಮಂತ್ರಿ ಅಭ್ಯರ್ಥಿಗಳ ಪಟ್ಟಿ ಸಂಬಂಧ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ. ಶೀಘ್ರದಲ್ಲಿಯೇ ಚುನಾವಣಾ ವೇಳಪಟ್ಟಿ ಪ್ರಕಟಗೊಳ್ಳಲಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ವರಿಷ್ಠರು 400 ಸ್ಥಾನ ಗೆಲ್ಲುವ ಗುರಿ ಹೊಂದಿರುವ ಹಿನ್ನೆಲೆಯಲ್ಲಿಕ್ಷೇತ್ರವಾರು ಗೆಲ್ಲುವ ಅಭ್ಯರ್ಥಿಗಳ ಬಗ್ಗೆ ಮಾಹಿತಿ ತರಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದು, ಈಗಾಗಲೇ ಗೆಲ್ಲುವಂತಹ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.