ಚಂಡೀಗಢ: ಪಂಜಾಬ್‍ನ ಅಮೃತಸರದಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸ್ವರ್ಣ ಮಂದಿರದ ಸಮೀಪ ಇಂದು ಮತ್ತೊಂದು ಸ್ಫೋಟ ಸಂಭವಿಸಿದೆ. ತಡ ರಾತ್ರಿ ಇದೇ ಪ್ರದೇಶದಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ ಆರು ಮಂದಿ ಗಾಯಗೊಂಡಿದ್ದ ಘಟನೆ ನಡೆದಿತ್ತು.
ಸ್ವರ್ಣ ಮಂದಿರಕ್ಕೆ ತೆರಳುವ ಸರಗರ್ಹಿ ಸರೈ ಮಾರ್ಗದ ಸಮೀಪ ಇಂದು ಬೆಳಗ್ಗೆ ಸ್ಫೋಟ ಸಂಭವಿಸಿದೆ. ಆದರೆ ಸ್ಫೋಟದ ಕಾರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಯಾವುದೇ ಪ್ರಾಣಹಾನಿ, ಗಾಯಗೊಂಡ ಬಗ್ಗೆ ವರದಿಯಾಗಿಲ್ಲ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿ ವಿವರಿಸಿದೆ.
ಸ್ವರ್ಣ ಮಂದಿರ ಪ್ರದೇಶದ ಸುತ್ತಮುತ್ತ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಬಾಂಬ್ ಸ್ಕ್ವಾಡ್, ಎಫ್‍ಎಸ್‍ಎಲ್ ತಂಡ ಶೋಧ ಕಾರ್ಯ ನಡೆಸುತ್ತಿರುವುದಾಗಿ ಅಮೃತಸರದ ಎಡಿಸಿಪಿ ಮೆಹತಾಬ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
Leave a Review