ಬೆಂಗಳೂರು : ವಿಧಾನಸೌಧಕ್ಕೆ ಕೂಗಳತೆ ದೂರದ ಕೆ ಆರ್ ಸರ್ಕಲ್ (ಕೃಷ್ಣರಾಜೇಂದ್ರ ವೃತ್ತ) ಬಳಿ ಇಂದು ಬೆಳಿಗ್ಗೆ ಎರಡು ಬಿಎಂಟಿಸಿ ಬಸ್ಗಳ ನಡುವೆ ಡಿಕ್ಕಿ ಸಂಭವಿಸಿ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ, ಅಪಘಾತದಿಂದ ಸುತ್ತಮುತ್ತಲಿನ ರಸ್ತೆಗಳಲ್ಲಿ 1 ಗಂಟೆಗೂ ಹೆಚ್ಚು ಕಾಲ ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರು ಪರದಾಡಿದರು. ಅಪಘಾತದಲ್ಲಿ ಗಾಯಗೊಂಡವರನ್ನು ಬಸ್ ನಿಂದ ಹೊರತೆಗೆಯಲು ಹರಸಾಹಸ ಪಡಬೇಕಾಯಿತು. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕೆ.ಆರ್. ಸರ್ಕಲ್ ಜಂಕ್ಷನ್ನ ಸಿಗ್ನಲ್ನಲ್ಲಿ ಬಿಎಂಟಿಸಿಯ ವಾಯು ವಜ್ರ (ವೋಲ್ಲೋ) ಬಸ್ ನಿಂತಿದ್ದಾಗ ಹಿಂದಿನಿAದ ಅತಿ ವೇಗವಾಗಿ ಬಂದ ಮತ್ತೊಂದು ಸಾಮಾನ್ಯ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ.ಭೀಕರ ಅಪಘಾತದಲ್ಲಿ ಚಾಲಕ ಗಂಭೀರ ಗಾಯಗೊಂಡಿದ್ದಾರೆ.



