ಮೀರತ್: ಉತ್ತರ ಪ್ರದೇಶದ ಮೀರತ್ನ ಟೈರ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಬಾಯ್ಲರ್ ಸ್ಪೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಉತ್ತರ ಪ್ರದೇಶದ ಮೀರತ್ನ ಇಂಚೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ವನ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಈ ಘಟನೆ ನಡೆದಿದೆ.
ಈ ಪ್ರದೇಶದಲ್ಲಿ ಟೈರ್ ಕರಗಿಸುವ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದು ಹಲವು ಪೊಲೀಸ್ ಠಾಣೆಗಳಿಂದ ಪಡೆಗಳು ಆಗಮಿಸಿದ್ದು, ರಕ್ಷಣಾ ಕಾರ್ಯ ಆರಂಭಿಸಲಾಗಿದೆ. ಸ್ಥಳಕ್ಕಾಗಮಿಸಿದ ಎಸ್ಪಿ ದೇಹತ್ ಕಮಲೇಶ್ ಬಹದ್ದೂರ್ ಸಿಂಗ್, ದುರ್ಗಾ ಟೈರ್ಸ್ ಹೆಸರಿನಲ್ಲಿ ಟೈರ್ ಕರಗಿಸುವ ಕಾರ್ಖಾನೆ ಇದೆ. ಬೆಳಗ್ಗೆ ಕಾರ್ಖಾನೆಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು.
6.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಈ ಕಾರ್ಖಾನೆಯು ಇಲ್ಲಿನ ನಿವಾಸಿಯಾಗಿರುವ ಅಮಿತ್ ಠಾಕೂರ್ ಅವರಿಗೆ ಸೇರಿದ್ದು ಎನ್ನಲಾಗಿದೆ. ಸ್ಥಳದಲ್ಲಿ ಪೊಲೀಸರಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ಗಾಯಾಳುಗಳನ್ನು ಮೀರತ್ ಗಂಗಾನಗರದ ದಿವ್ಯಜ್ಯೋತಿ ನರ್ಸಿಂಗ್ ಹೋಂಗೆ ದಾಖಲಿಸಲಾಗಿದೆ. ಬಾಯ್ಲರ್ ಸ್ಫೋಟಗೊಳ್ಳಲು ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಅಪಘಾತಕ್ಕೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ, ಇದಕ್ಕಾಗಿ ವಿಧಿವಿಜ್ಞಾನ ತಂಡ ಮತ್ತು ಇತರ ತನಿಖಾ ತಂಡಗಳು ಕೂಡ ಸ್ಥಳಕ್ಕೆ ತಲುಪುತ್ತಿವೆ. ಎಸ್ಪಿ ದೇಹತ್ ಕಮಲೇಶ್ ಬಹದ್ದೂರ್ ಅವರು ಈ ಸಂಪೂರ್ಣ ಘಟನೆಯ ಮೇಲೆ ನಿಗಾ ವಹಿಸಿದ್ದಾರೆ.ಕಾರ್ಖಾನೆಯಲ್ಲಿ ಸುರಕ್ಷತಾ ಮಾನದಂಡಗಳ ಬಗ್ಗೆ ಹೆಚ್ಚಿನ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಹೇಳಲಾಗುತ್ತಿದೆ.