ಬೆಂಗಳೂರು: ಬಿಬಿಎಂಪಿ ಕೇಂದ್ರ ಕಛೇರಿ: ಡಾ||ರಾಜ್ ಕುಮಾರ್ ಗಾಜಿನಮನೆ ಅವರಣದಲ್ಲಿ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಅಂತರಾಷ್ಟ್ರೀಯ ವಿಶ್ವ ಮಹಿಳಾ ದಿನಾಚರಣೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕಿಯರಿಗೆ ದಿಟ್ಟ ಮಹಿಳಾ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ವಿಶ್ವ ಮಹಿಳಾ ದಿನಾಚರಣೆಯನ್ನು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಹಿರಿಯ ಚಲನಚಿತ್ರ ನಟ ವಿ.ರವೀಂದ್ರನ್, ನಟಿ ಮಾಲಾಶ್ರೀ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿ ಮತ್ತು ಐ.ಎ.ಎಸ್.ಅಧಿಕಾರಿಗಳಾದ ಮೌನೀಶ್ ಮೌದ್ದೀಲ್, ಶ್ರೀಮತಿ ಸ್ನೇಹಾಲ್, ಸೂರಳ್ಕರ್ ವಿಕಾಸ್ ಕಿಶೋರ್, ಡಾ||ಹರೀಶ್ ಕೆ.ಮತ್ತು ಕೆ.ಎ.ಎಸ್ ಅಧಿಕಾರಿ ಡಾ||ಮಂಜುನಾಥಸ್ವಾಮಿರವರು, ಅಧ್ಯಕ್ಷರಾದ ಎ.ಅಮೃತ್ ರಾಜ್ ರವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು.
ತುಷಾರ್ ಗಿರಿನಾಥ್ ರವರು ಮಾತನಾಡಿ ಬಿಬಿಎಂಪಿಯಲ್ಲಿ ಶೇಕಡ 50ರಷ್ಟು ಮಹಿಳೆಯರಿಗೆ ಕೆಲಸ ಮಾಡುತ್ತಿದ್ದಾರೆ ಪೌರ ಕಾರ್ಮಿಕರಲ್ಲಿ ಶೇಕಡ 80ರಷ್ಟು ಮಹಿಳೆಯರು ಕಾರ್ಯನಿರ್ವಹಿಸುತ್ತಾ ಇದ್ದಾರೆ. ಬಿಬಿಎಂಪಿ ಇರುವುದು ನಾಗರಿಕರ ಸೇವೆ ಮಾಡಲು, ಒಳ್ಳೆಯ ಸೇವೆ ನೀಡಲು ಮಹಿಳಾ ಸಿಬ್ಬಂದಿಗಳು ಉತ್ತಮ ಸಹಕಾರ ನೀಡುತ್ತಿದ್ದಾರೆ. ಮಕ್ಕಳ ವಿದ್ಯಾಭ್ಯಾಸ, ಕುಟುಂಬದ ನಿರ್ವಹಣೆ ಅತ್ತೆ, ಮಾವ, ಪತಿಯ ನೋಡಿಕೊಂಡು ಕೆಲಸದಲ್ಲಿ ಉತ್ತಮ ಸೇವೆ ಮಾಡುವ ಮಹಿಳೆ ದಿಟ್ಟತನ ಮೆಚ್ಚಬೇಕು. ಮಹಿಳೆ ಮಾತೃಸ್ವರೂಪಿಯಾಗಿ ನಿಲ್ಲುತ್ತಾಳೆ ಎಂದು ಹೇಳಿದರು.
ಎ.ಅಮೃತ್ ರಾಜ್ ರವರು ಮಹಿಳೆ ತಾಯಿಯಾಗಿ, ಅಕ್ಕ,ತಂಗಿ ವಿವಿಧ ರೂಪದಲ್ಲಿ ಇಡಿ ಕುಟುಂಬವನ್ನು ಸಲುಹುವಳು. ಮಹಿಳೆ ಅಬಲೆಯಲ್ಲ ಸಬಲೆ ಎಂದು ರೂಪಿಸಿದ್ದಾರೆ. ಚಲನಚಿತ್ರ, ನಾಟಕ, ಸಾಹಿತ್ಯ, ಕಲೆ ರಾಜಕೀಯ ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು ಸಾಧನೆ ಮಾಡಿ ತೋರಿಸಿದ್ದಾರೆ. ಕುಟುಂಬ ಜೊತೆಯಲ್ಲಿ ಸಮಾಜದ ಅಭಿವೃದ್ದಿಗೆ ಮಹಿಳೆಯರ ಪ್ರಮುಖ ಪಾತ್ರವಹಿಸಿದ್ದಾರೆ ಅಂತಹ ಸಾಧಕ ಮಹಿಳೆಯರಿಗೆ ಗೌರವಿಸುವ ಶುಭಾ ದಿನವೆ ವಿಶ್ವ ಮಹಿಳಾ ದಿನಾಚರಣೆ ಎಂದು ಹೇಳಿದರು.
ಸಾಧಕಿಯರಿಗೆ ದಿಟ್ಟ ಮಹಿಳೆ ಪ್ರಶಸ್ತಿಯನ್ನು ಚಲನಚಿತ್ರ ನಟಿ ವಿನಯಪ್ರಸಾದ್, ಖ್ಯಾತ ಹಿನ್ನಲೆ ಗಾಯಕಿ ಎಂ.ಡಿ.ಪಲ್ಲವಿ, ಯುನೈಟೆಡ್ ಆಸ್ಪತ್ರೆಯ ನಿರ್ದೇಶಕಿ ಡಾ||ವೀಣಾ ಸಿದ್ದಾರೆಡ್ಡಿ, ಸಹಾಯಕ ಪೊಲೀಸ್ ಆಯುಕ್ತರಾದ ಎಂ.ಸಿ.ಕವಿತಾ, ಚಲನಚಿತ್ರ ನಟಿ, ನಿರ್ದೇಶಕಿ ಶೀತಲ್ ಶೆಟ್ಟಿ, ಹಿರಿಯ ವಕೀಲೆ ಶೀದೇವಿ ಪಾಟೀಲ್, ಟಿ.ವಿ.9ನಿರೂಪಕಿ ಶುಭಶ್ರೀ ಜೈನ್, ಹಿರಿಯ ಪತ್ರಕರ್ತೆ ಪ್ರತಿಮಾ ಭಟ್, ವಿಸ್ತಾರ್ ನ್ಯೂಸ್ ಹಿರಿಯ ನಿರೂಪಕಿ ಶ್ರೀಮತಿ ಪ್ರತಿಭಾ ಪ್ರಕಾಶ್, ಸಿಂಧಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಮತಿ ಸುಚಿತ್ರಾ ಮತ್ತು ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 14 ಮಹಿಳೆಯರನ್ನು ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಯುನೈಟೆಡ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಮತ್ತು ಶೇಖರ್ ಕಣ್ಣಿನ ಆಸ್ಪತ್ರೆ ವತಿಯಿಂದ ಕಣ್ಣಿನ ಪರೀಕ್ಷೆ ಹಾಗೂ ಮಹಿಳೆಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಘದ ಪದಾಧಿಕಾರಿಗಳಾದ ಸಾಯಿಶಂಕರ್ .ಎ.ಜಿ.ಬಾಬಣ್ಣ, ಸೋಮಶೇಖರ್, ಕೆ.ನರಸಿಂಹ, ಹೆಚ್.ಕೆ.ತಿಪ್ಪೇಶ್, ರೇಣುಕಾಂಬ, ಕೆ.ಮಂಜೇಗೌಡ, ಎಸ್.ಜಿ.ಸುರೇಶ್, ಮಂಜುನಾಥ್, ಉಮೇಶ್ ವಿ, ಸಂತೋಷ್ ಕುಮಾರ್ ನಾಯ್ಕ, ಸಂತೋಷ್ ಕುಮಾರ್, ಹೆಚ್.ಬಿ.ಹರೀಶ್ ರವರು ಉಪಸ್ಥಿತರಿದ್ದರು.