ಹಿಂದಿ ಚಿತ್ರರಂಗದ ನಟ ಅನ್ನು ಕಪೂರ್ ಎದೆನೋವಿನಿಂದ ಆಸ್ಪತ್ರೆ ದಾಖಲಾಗಿದ್ದಾರೆ. ತೀವ್ರ ಎದೆ ನೋವು ಕಾಣಿಸಿಕೊಂಡ ಬೆನ್ನಲ್ಲೇ ಅನ್ನು ಕಪೂರ್‌ನ್ನು ದೆಹಲಿ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಟನ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಹೆಲ್ತ್ ಬುಲೆಟಿನ್‌ನಲ್ಲಿ ಹೇಳಲಾಗಿದೆ.
ಬಾಲಿವುಡ್‌ನ ಸಾಕಷ್ಟು ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದ ನಟ ಅನ್ನು ಕಪೂರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಗಂಗಾರಾಮ್ ಆಸ್ಪತ್ರೆ ವೈದ್ಯ ಡಾ.ಅಜಯ್ ಸ್ವರೂಪ್ ಈ ಕುರಿತು ಮಾಹಿತಿ ನೀಡಿದ್ದಾರೆ.
ಅನ್ನು ಕಪೂರ್ ಅವರಿಗೆ ಎದೆನೋವಿನ ಕಾರಣದಿಂದ ಗಂಗಾ ರಾಮ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅನ್ನು ಕಪೂರ್ ಅವರಿಗೆ ಕಾರ್ಡಿಯಾಲಜಿಸ್ಟ್ ವೈದ್ಯ ಸುಶಾಂತ್ ವತ್ತಾಲ್ ಅವರ ತಂಡ ಚಿಕಿತ್ಸೆ ನೀಡಿದ್ದಾರೆ. ಇದೀಗ ನಟನ ಆರೋಗ್ಯ ಪರಿಸ್ಥಿತಿ ಸುಧಾರಿಸಿದೆ ಎಂದಿದ್ದಾರೆ.ನಟ ಅನ್ನು ಕಪೂರ್ 1979ರಲ್ಲಿ ಅಮಿತಾಬ್ ಬಚ್ಚನ್ ಅಭಿನಯದ `ಕಾಲಾ ಪಥ್ಥರ್’ ಚಿತ್ರದ ಮೂಲಕ ಬಾಲಿವುಡ್ ಎಂಟ್ರಿ ಕೊಟ್ಟರು. ಇನ್ನೂ ಇವರು ನಟನಾಗಿ ಮಾತ್ರವಲ್ಲ ನಿರ್ದೇಶಕ, ಗಾಯಕ, ರೇಡಿಯೋ ಜಾಕಿಯಾಗಿಯೂ ಗುರುತಿಸಿಕೊಂಡಿದ್ದಾರೆ.
Leave a Review