ಬೆಂಗಳೂರು: ರಾಜ್ಯದ ರಾಜಭವನಕ್ಕೆ ನೆನ್ನೆ ರಾತ್ರಿ ಸುಮಾರು 11 ಗಂಟೆ ಸರಿಯಾಗಿ ಅಪರಿಚಿತ ವ್ಯಕ್ತಿ ಒಬ್ಬ ದೂರವಾಣಿ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ತಿಳಿಸಿರುತ್ತಾನೆ.
ತಕ್ಷಣ ರಾಜ ಭವನ ಸಿಬ್ಬಂದಿ ವಿಧಾನಸೌಧ ಪೊಲೀಸ್ ಠಾಣೆಗೆ ಕರೆ ಮಾಡಿ ತಿಳಿಸಿದ ಮೇರೆಗೆ ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳ ಆಗಮಿಸಿ ರಾಜಭವನ ಸಂಪೂರ್ಣವಾಗಿ ಪರಿಶೀಲನೆ ನಡೆಸಿದ್ದಾರೆ. ಆದರೆ ಇದು ಹುಸಿ ಬಾಂಬ್ ಕರೆ ಎಂದು ತಿಳಿದು ಬಂದಿದೆ. ಈ ಅಪರಿಚಿತನು ಉಪ್ಪಾರ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಕರೆ ಮಾಡಿರುವುದಾಗಿ ತಿಳಿದು ಬಂದಿರುತ್ತದೆ.
ವಿಧಾನಸೌಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸುತ್ತಾರೆ. ಮೂರುವಾರಗಳ ಹಿಂದೆ ಸುಮಾರು 76 ಶಾಲೆಗಳಿಗೂ ಸಹ ಇದೇ ರೀತಿ ಬಾಂಬ್ ಕರೆ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಸ್ಥಳಕ್ಕೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ರವರು ಭೇಟಿ ನೀಡಿ ಪರಿಶೀಲಿಸಿದರು.