ದೆಹಲಿ: ಲೋಕಸಭೆಗೆ ಸ್ಪರ್ಧಿಸುವ ನಿರೀಕ್ಷೆಯನ್ನು ತಾವು ಇಟ್ಟುಕೊಂಡಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ತಾವು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿರುವ ಅವರು,
ಲೋಕಸಭಾ ಚುನಾವಣಾ ಸಂಬಂಧ ಪಕ್ಷ ಯಾರಿಗೆ ಟಿಕೆಟ್ ನೀಡಿತ್ತೋ ಅವರ ಪರವಾಗಿ ಕೆಲಸ ಮಾಡುತ್ತೇನೆ. ಪಕ್ಷ ಸಂಘಟನೆ ದೃಷ್ಟಿಯಿಂದ ಈಗಾಗಲೇ ಹಾವೇರಿ, ಗದಗ ಕ್ಷೇತ್ರದಲ್ಲಿ ಮುಖಂಡರು ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ದೇನೆ.
ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸಲು ಹಾಲಿ ಸಂಸದ ಶಿವಕುಮಾರ ಉದಾಸಿ ಅವರನ್ನು ಮನವೊಲಿಸುವ ಕೆಲಸ ಮುಂದುವರಿದಿದೆ ಎಂದು ತಿಳಿಸಿದ್ದಾರೆ.