ಬೆಂಗಳೂರು: ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸಿಐಡಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ವಿಚಾರಣೆಗೆ ತೆರಳುವ ಮುನ್ನ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು,ನಾನು ಸಿಐಡಿ ವಿಚಾರಣೆಗೆ ಹೋಗುತ್ತಿದ್ದೇನೆ ಎಂದು ಹೇಳಿದರು.ರಾಜ್ಯದ ಜನತೆ ಈಗಾಗಲೇ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬೆಲೆ ಏರಿಕೆಯಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುವ ರಾಜ್ಯ ಸರ್ಕಾರದ ನಿರ್ಧಾರ ಅಪರಾಧವಾಗಿದೆ. ರಾಜ್ಯ ಸರ್ಕಾರ ಕೂಡಲೇ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.