ತುಮಕೂರು: ದೇವಸ್ಥಾನಕ್ಕೆಂದು ಬಸ್‍ಗಾಗಿ ಕಾಯುತ್ತಿದ್ದಾಗ ಬಸ್ ನಿಲ್ದಾಣದಲ್ಲಿ ಎರಡು ಬಸ್‍ಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರುಮಹಿಳೆಯರು ಸಾವನ್ನಪ್ಪಿರುವ ಘಟನೆ ತುಮಕೂರು ಬಸ್ ನಿಲ್ದಾಣದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದ ಪುಟ್ಟತಾಯಮ್ಮ ಹಾಗೂ ಪಂಕಜ ಎಂಬುವರೇ ಮೃತಪಟ್ಟಿರುವ ದುರ್ದೈವಿಗಳು.
ತುಮಕೂರು ಜಿಲ್ಲೆಯ ಗೊರವನಳ್ಳಿ ದೇವಸ್ಥಾನಕ್ಕೆ ತೆರಳಲು ಆರು ಮಂದಿ ಮಹಿಳೆಯರು ತುಮಕೂರು ಕೆ.ಎಸ್ ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದು ಬಸ್ ಹತ್ತಲು ಮುಂದಾಗಿದ್ದರು.
ಈ ಸಂದರ್ಭದಲ್ಲಿ ಬಸ್ ಏಕಾಏಕಿ ಹಿಂಬದಿಗೆ ಚಲಿಸಿದ್ದು ಬಸ್‍ನ ಹಿಂಬದಿಯಲ್ಲಿದ್ದ ಮತ್ತೊಂದು ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ಬಸ್‍ಗಳ ಮಧ್ಯೆ ಸಿಲುಕಿದ ಮಹಿಳೆಯರಿಬ್ಬರು ಮೃತಪಟ್ಟಿದ್ದಾರೆ.ಉಳಿದ ನಾಲ್ವರು ಮಹಿಳೆಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಭವಿಸಿದ ಕೂಡಲೇ ಬಸ್ ಚಾಲಕ ಪರಾರಿಯಾಗಿದ್ದಾನೆ.
Leave a Review