ವಿಜಯಪುರ: ಮರಾಠ ಮೀಸಲಾತಿ ಹೋರಾಟ ತೀವ್ರಗೊಂಡಿದೆ. ಬೆಳಗಾವಿಯ ಬೀಡ್ ಜಿಲ್ಲಾ ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಇದರೊಂದಿಗೆ ವಿಜಯಪುರದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಮರಾಠ ಮೀಸಲಾತಿಗೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಪ್ರತಿಭಟನೆ ಮುಂದುವರಿದಿದ್ದು, ಕರ್ನಾಟಕದ ಬಸ್ಗಳಿಗೂ ಬೆಂಕಿ ಹಚ್ಚಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯಿಂದ ಮಹಾರಾಷ್ಟ್ರದ ಕೆಲವು ಭಾಗಗಳಿಗೆ ಸಂಪರ್ಕಿಸುವ 42 ಸರ್ಕಾರಿ ಬಸ್ಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಮಹಾರಾಷ್ಟ್ರದ ಪುಣೆ, ಮುಂಬಯಿ, ಲಾತೋರ್, ನಾಂದೇಡ್, ತುಳಜಾಪುರ ಸೇರಿದಂತೆ ಇತರೆ ಪ್ರದೇಶಗಳಿಗೆ ತೆರಳಬೇಕಿದ್ದ ಕೆಕೆಆರ್ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಸೊಲ್ಹಾಪುರ, ಸಾಂಗ್ಲಿ, ಮೀರಜ್ಗೆ ಮಾತ್ರ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ ಮಹಾರಾಷ್ಟ್ರ ಸರ್ಕಾರಿ ಬಸ್ಗಳು ಎಂದಿನಂತೆ ಸಂಚರಿಸಲಿವೆ ಎಂದು ವಿಜಯಪುರ ಜಿಲ್ಲಾ ಸಾರಿಗೆ ಉಪವಿಭಾಗಾಧಿಕಾರಿ ಮೊಹಮ್ಮದ್ ತಿಳಿಸಿದ್ದಾರೆ.