ಬೆಂಗಳೂರು: ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲು ಹೊರಟಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ತನ್ನ ವೈಫಲ್ಯ ಮುಚ್ಚಿ ಹಾಕಲು ಸದನ ಬಳಸಿಕೊಳ್ಳಲು ಹೊರಟಿದ್ದಾರೆ. ಧ್ವೇಷ ರಾಜಕಾರಣ ಮಾಡಲು ಸದನದ ದುರ್ಬಳಕೆ ಮಾಡಲು ಸರ್ಕಾರ ಮುಂದಾಗಿದ್ದು ದುರ್ದೈವ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.
ಮನರೇಗಾ ಯೋಜನೆಯಲ್ಲಿ ಕೆಲ ಮಾರ್ಪಾಡು, ಸುಧಾರಣೆ ತಂದಿದ್ದಾರೆ. ಈ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡಲು ಹೊರಟಿದೆ. ೧೪೦ ಶಾಸಕರ ಬೆಂಬಲ ಇದೆ ಎಂದು ದಬ್ಬಾಳಿಕೆ ಮಾಡಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಬಿವಿವೈ ಕಿಡಿ



