ಬೆಂಗಳೂರು: ರಾಜ್ಯದಲ್ಲಿ ಮತ್ತೆ 2 ವಿಧಾನಸಭಾ ಕ್ಷೇತ್ರಗಳ ಉಪ-ಚುನಾವಣೆ ಎದುರಾಗಲಿದ್ದು, ಹಿರಿಯೂರು ಹಾಗೂ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳ ಉಪ-ಚುನಾವಣೆಗೆ ತೆರೆಮರೆಯಲ್ಲಿ ವೇದಿಕೆ ಸಜ್ಜಾಗುತ್ತಿದೆ.
ಕಳೆದ ಎರಡು ದಿನಗಳ ಹಿಂದೆ ಸಚಿವ ಡಿ. ಸುಧಾಕರ್ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ತೆರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರ ಹಾಗೂ ಜೈಲು ಸೇರಿ, ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಅವರ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರ.ವಿನಯ್ ಕುಲಕರ್ಣಿಗೆ ಕೋರ್ಟ್ ಶಿಕ್ಷೆಗೆ ಆದೇಶಿಸಿರುವ ಕಾರಣ. ಅವರ ಶಾಸಕ ಸ್ಥಾನ ಆನರ್ಹವಾಗಿರುವ ಬೆನ್ನಲ್ಲೇ ಅವರು ಪ್ರತಿನಿಧಿಸುವ ಧಾರವಾಡ ಗ್ರಾಮೀಣ ಕ್ಷೇತ್ರಕ್ಕೂ ಉಪ-ಚುನಾವಣೆ ನಡೆಯಲಿದೆ.ಹೀಗಾಗಿ, ಎರಡು ವಿಧಾನಸಭಾ ಕ್ಷೇತ್ರಗಳಲ್ಲೂ ಉಪ-ಚುನಾವಣೆ ಎದುರಿಸಲು ಸಜ್ಜಾದ ಎರಡು ರಾಷ್ಟ್ರೀಯ ಪಕ್ಷಗಳಾಗಿವೆ. ಈಗಾಗಲೇ ಚಿತ್ರದುರ್ಗದಲ್ಲಿ ಯಡಿಯೂರಪ್ಪರ ಅಭಿಮಾನೋತ್ಸವ ನಡೆಸಲಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ. ಎರಡು ವಿಧಾನಸಭಾ ಕ್ಷೇತ್ರಗಳಲ್ಲೂ ತಮ್ಮದೇ ಆದ strategy ಯೊಂದಿಗೆ ಆಖಾಡ ಸೃಷ್ಟಿಸುತ್ತಿದ್ದಾರೆ. ಹಿರಿಯೂರು ಈ ಹಿಂದೆ ಬಿಜೆಪಿ ತೆಕ್ಕೆಯಲ್ಲಿದ್ದಂತಹ ಕ್ಷೇತ್ರ. ಈಗ ಉಪ-ಚುನಾವಣೆ ಎದುರಾದ್ರೆ, ಅದನ್ನು ತಮ್ಮ ತೆಕ್ಕೆಗೆ ತಂದುಕೊಳ್ಳುವುದು. ಇತ್ತ ಧಾರವಾಡ ಗ್ರಾಮೀಣ ಕ್ಷೇತ್ರವು ಅಷ್ಟೇ.
ರಾಜ್ಯದಲ್ಲಿ ಮತ್ತೆ ಎದುರಾಗಲಿದೆ 2 ವಿಧಾನಸಭಾ ಕ್ಷೇತ್ರಗಳ ಉಪ-ಚುನಾವಣೆ



