ಕಲಬುರಗಿ: ಎಸ್ಟಿ ಬೋರ್ಡ್ನಲ್ಲಿ ದೊಡ್ಡ ಹಗರಣವೊಂದು ನಡೆದಿ ರುವುದು ನಿನ್ನೆ ಬೆಳಕಿಗೆ ಬಂದಿದೆ. ಆ ಇಲಾಖೆ ನೌಕರ 187 ಕೋಟಿ ಹಗರಣದ ಬಗ್ಗೆ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣವೇ ಇಲಾಖೆಯ ಸಚಿವ ನಾಗೇಂದ್ರರನ್ನು ವಜಾ ಮಾಡಬೇಕು.
ಇಲ್ಲವಾದಲ್ಲಿ ಬಿಜೆಪಿ ರಾಜ್ಯದಾದ್ಯಂತ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಕಲಬುರಗಿಯಲ್ಲಿ ಮಾತನಾಡಿದ ಅವರು, ನಿಜವಾಗಿಯೂ ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್.
ಕೂಡಲೆ ಸಿಎಂ ಸಿದ್ದರಾಮಯ್ಯ ಆ ಇಲಾಖೆಯ ಸಚಿವರನ್ನು ಮಂತ್ರಿ ಮಂಡಲದಿಂದ ಕೈ ಬಿಡಬೇಕು ಎಂದರು. ಹೈಕೋರ್ಟ್ ನ್ಯಾಯಧೀಶರ ನೈತೃತ್ವದಲ್ಲಿ ಪ್ರಕರಣದ ತನಿಖೆಯಾಗಬೇಕು. ಈ ವಿಚಾರವಾಗಿ ನಾವು ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ ಎಂದು ಅವರು ಹೇಳಿದರು.