ಬೆಂಗಳೂರು: ಡಾ. ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಕೆ.ಎಚ್. ಮುನಿಯಪ್ಪ, ಪ್ರಿಯಾಂಕ ಖರ್ಗೆ, ಆರ್. ರಾಮಲಿಂಗಾರೆಡ್ಡಿ, ಕೃಷ್ಣಭೈರೇಗೌಡ, ಯತೀಂದ್ರ ಸಿದ್ದರಾಮಯ್ಯ, ಕೆ.ಜೆ.ಜಾರ್ಜ್, ಯು.ಟಿ.ಖಾದರ್, ಎಂ.ಬಿ.ಪಾಟೀಲ್, ಈಶ್ವರ್ ಖಂಡ್ರೆ, ಬೈರತಿ ಸುರೇಶ್, ಶರಣಪ್ರಕಾಶ್ ಪಾಟೀಲ್ ಸಂಪುಟ ಸೇರುವ ನೂತನ ಸಚಿವರುಗಳಾಗಿದ್ದಾರೆ. ನಿನ್ನೆಯಿಂದ ದೆಹಲಿಯಲ್ಲಿ ಸಂಭಾವ್ಯ ಸಚಿವರ ಪಟ್ಟಿ ಸಿದ್ದಪಡಿಸಲು ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ರಾಹುಲ್ಗಾಂಧಿ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ, ರಾಜ್ಯದ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮರ್ನಾಲ್ಕು ಬಾರಿ ಸಭೆ ಸೇರಿ ಕಸರತ್ತು ನಡೆಸಿದ್ದಾರೆ. ತಡರಾತ್ರಿವರೆಗೂ ಸಭೆ ನಡೆಸಿದ ನಂತರ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಸಂಪುಟ ಸೇರುವ ಸಚಿವರು



