ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಅಡ್ವಾನ್ಸ್ ಕೇಬಲ್
ಕಾರ್ಖಾನೆಯಲ್ಲಿ ಸೋಮವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಸತತ ನಾಲ್ಕು ತಾಸುಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ಬೆಂಗಳೂರಿನಿಂದ ಬಂದಿದ್ದ ಎನ್ಡಿಆರ್ಎಫ್ ಸಿಬ್ಬಂದಿ ಮತ್ತು ಹತ್ತು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಬೆಂಕಿಯ ಕೆನ್ನಾಲಿಗೆ ವ್ಯಾಪಿಸುತ್ತಲೇ ಇತ್ತು. ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟ ಅಗ್ನಿ ಶಾಮಕ ಇಲಾಖೆ.
ಕೈಗಾರಿಕಾ ಪ್ರದೇಶದಲ್ಲಿ ಕಾರ್ಖಾನೆ ಸುತ್ತಲೂ ಇತರೆ ಘಟಕಗಳಿರುವ ಕಾರಣ ಹೊಗೆ ಅವರಿಸಿ ಬೆಂಕಿ ತಗಲುವ ಆತಂಕ ಎದುರಾಗಿತ್ತು. ಪ್ರಾಥಮಿಕ ವರದಿಗಳ ಘಟನೆಯಲ್ಲಿ ಪ್ರಾಣಹಾನಿಯಾದ ಮಾಹಿತಿ ಲಭ್ಯವಾಗಿಲ್ಲ. ಬೆಂಕಿ ಕೊಳ್ಳುತ್ತಲೇ ಕಾರ್ಮಿಕರು ಹೊರ ಬಂದಿದ್ದಾರೆ ಎಂದು ತಿಳಿದು ಬಂದಿದೆ. ೨೩೦೮ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ತಯಾರಿಕಾ ಕಂಪನಿಗೆ ಕೋಟಿಗಟ್ಟಲೇ ರೂಪಾಯಿಗಳು ನಷ್ಟವಾಗಿದೆ.
ಬೆಂಗಳೂರು ರಾಜ್ಯ ಹೆದ್ದಾರಿಗೆ ಸಮೀಪವೇ ಕಾರ್ಖಾನೆ ಇರುವುದರಿಂದ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿತ್ತು. ಘಟನಾ ಸ್ಥಳದಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಮಲ್ಲಪ್ಪ ಕೆ.ಯಗೋಳ ಭೇಟಿ ನೀಡಿ ಮಾಹಿತಿ ಪಡೆದರು.
ಶಾಸಕ ಧೀರಜ್ ಮುನಿರಾಜು ಹಾಗೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಅದ್ಯಕ್ಷ ಪ್ರೇಮ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಅಗ್ನಿ ಅವಘಡ ಬಗ್ಗೆ ಮಾಹಿತಿ ಪಡೆದರು.
ಕೇಬಲ್ ಕಾರ್ಖಾನೆಗೆ ಬೆಂಕಿ ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ



