ಬೆಂಗಳೂರು: ವೈಟ್ಫೀಲ್ಡ್ನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ಅಧಿಕಾರಿಗಳು ಮತ್ತಿಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ವಶಪಡಿಸಿಕೊಂಡಿರುವ ಶಂಕಿತರ ಜತೆ ಸಂಪರ್ಕ ಹೊಂದಿರುವ ಶಂಕೆಯ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ರಾಮೇಶ್ವರಂ ಕೆಫೆ ಸ್ಫೋಟ ಹಾಗೂ ಹಳೆಯ ಪ್ರಕರಣಗಳ ನಡುವೆ ಸಾಮ್ಯತೆ ಕಂಡು ಬರುತ್ತಿರುವ ಹಿನ್ನಲೆಯಲ್ಲಿ ಹಳೆಯ ಪ್ರಕರಣಗಳಲ್ಲಿ ಭಾಗಿಯಾದವರ ಮೇಲೆ ಎನ್ಐಎ ನಿಗಾ ಇರಿಸಿದೆ. ಈಗಾಗಲೇ ಜೈಲಿನಲ್ಲಿರುವ ಕೆಲ ಕೈದಿಗಳನ್ನು ಕೂಡ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಇದರ ಭಾಗವಾಗಿಯೇ, ಮತ್ತಿಬ್ಬರು ಆರೋಪಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.