ಇಂಡಿಯನ್ ಪ್ರೀಮಿಯರ್ ಲೀಗ್ನ 17ನೇ ಆವೃತ್ತಿಯ 7ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 63 ರನ್ಗಳಿಂದ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಇದೀಗ ಗುಜರಾತ್ ತಂಡದ ನಾಯಕ ಶುಭ್ಮನ್ ಗಿಲ್ ದಂಡದ ಶಿಕ್ಷೆಗೆ ಒಳಗಾಗಿದ್ದಾರೆ.
ಈ ಮೂಲಕ ಈ ಬಾರಿ ಐಪಿಎಲ್ನಲ್ಲಿ ಸ್ಲೋ ಓವರ್ ರೇಟ್ ಶಿಕ್ದೆಗೆ ಗುರಿಯಾದ ಮೊದಲ ನಾಯಕ ಎನಿಸಿಕೊಂಡಿದ್ದಾರೆ. ಮಾರ್ಚ್ 26 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಗುಜರಾತ್ ಟೈಟಾನ್ಸ್ ನಾಯಕ ಶುಭ್ಮನ್ ಗಿಲ್ ಅವರಿಗೆ ದಂಡ ವಿಧಿಸಲಾಗಿದೆ. ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್ನ ನೀತಿ ಸಂಹಿತೆಯ ಅಡಿಯಲ್ಲಿ ಈ ಶಿಕ್ಷೆಗೆ ಗುರಿಯಾಗಿದ್ದಾರೆ.