ಲಕ್ನೋ: ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳ (ಆರ್‍ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಪತ್ನಿ ರಾಬ್ಡಿದೇಬಿ ನಿವಾಸದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಳಿ ನಡೆಸಿದೆ.
ಲಾಲು ಪ್ರಸಾದ್ ಯಾದವ್ ಪತ್ನಿ ರಾಬ್ಡಿ ದೇವಿ ಮತ್ತು ಮಗಳು ಮಿಸಾ ಅವರಿಗೆ ಸಂಬಂಧಿಸಿದ ಸ್ಥಳಗಳು ಸೇರಿದಂತೆ ಪಾಟ್ನಾ, ಗೋಪಾಲ್‍ಗಂಜ್ ಮತ್ತು ದೆಹಲಿಯ 13 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ.
ಅತ್ಯಂತ ಕಡಿಮೆ ಬೆಲೆಗೆ ಭೂಮಿಗೆ ಬದಲಾಗಿ ಕೆಲವು ಅನರ್ಹ ಅಭ್ಯರ್ಥಿಗಳಿಗೆ ಉದ್ಯೋಗ ನೀಡಲಾದ ಪ್ರಕರಣ ಇದಾಗಿದ್ದು, ಸಿಬಿಐ ಎಫ್‍ಐಆರ್‍ನಲ್ಲಿ ಲಾಲು ಪ್ರಸಾದ್, ರಾಬ್ಡಿ ದೇವಿ, ಮಿಸಾ ಯಾದವ್, ಹೇಮಾ ಯಾದವ್ ಮತ್ತು ಕೆಲವು ಅಅಭ್ಯರ್ಥಿಗಳನ್ನು ಆರೋಪಿಗಳಾಗಿ ಹೆಸರಿಸಿದೆ.
ಲಾಲು ಪ್ರಸಾದ್ ರೈಲ್ವೆ ಸಚಿವರಾಗಿದ್ದಾಗ ಹಗರಣ ನಡೆದಿತ್ತು. ಭೂಮಿಗೆ ಪ್ರತಿಯಾಗಿ ಅಭ್ಯರ್ಥಿಗಳಿಗೆ ಉದ್ಯೋಗಗಳನ್ನು ನೀಡಲಾಯಿತು. ಬಿಹಾರದ ವಿವಿಧ ಭಾಗಗಳಲ್ಲಿನ ಪ್ರಧಾನ ಆಸ್ತಿಗಳನ್ನು ಯಾದವ್ ಕುಟುಂಬಕ್ಕೆ ಸಂಬಂಧಿಸಿದ ಕಂಪನಿಗಳು ಸ್ವಾಧೀನಪಡಿಸಿಕೊಂಡಿವೆ. ಸಿಬಿಐಗೆ ಕೆಲವು ಅಭ್ಯರ್ಥಿಗಳ ಸಾಕ್ಷ್ಯ ಸಿಕ್ಕಿದೆ.
ಲಾಲು ಪ್ರಸಾದ್ ರೈಲ್ವೆ ಸಚಿವರಾಗಿದ್ದಾಗ, ಕೆಲವು ಜನರಿಗೆ ಉದ್ಯೋಗ ನೀಡಲು ಭೂಮಿಯನ್ನು ತೆಗೆದುಕೊಳ್ಳಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.
Leave a Review