ತಮಿಳುನಾಡು : ಮೊದಲ ಯತ್ನದಲ್ಲೇ ತಮಿಳುನಾಡಿನಲ್ಲಿ ದಳಪತಿ ವಿಜಯ ನೇತೃತ್ವದ ಟಿವಿಕೆ ಪಕ್ಷ ಭರ್ಜರಿ ಮುನ್ನಡೆ ಸಾಧಿಸಿದ್ದು ನಟ ದಳಪತಿ ವಿಜಯ್ ಅವರ ಮನೆಯಲ್ಲಿ ಈಗ ಅವರ ತಂದೆ ತಾಯಿ ಸೇರಿದಂತೆ ಕುಟುಂಬದ ಸದಸ್ಯರು ಎಲ್ಲರೂ ಕೂಡ ಭಾರೀ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಇನ್ನೊಂದು ಕಡೆ DMK ಹಾಗೂ AIDMK ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು ಸಿಎಂ ಸ್ಟಾಲಿನ್ ಅವರು ಸ್ಪರ್ಧಿಸಿದ ಕ್ಷೇತ್ರದಲ್ಲಿಯೇ ಅವರಿಗೆ ಹಿನ್ನಡೆ ಆಗಿದೆ. ಹಾಗಾಗಿ ತಮಿಳುನಾಡಿನಲ್ಲಿ ಮೊದಲ ಬಾರಿ ನಟ ವಿಜಯ್ ಅವರು ಇತಿಹಾಸ ನಿರ್ಮಿಸಲು ಮುಂದಾಗಿದ್ದು, ಟಿವಿಕೆ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದರೆ ಸರ್ಕಾರ ರಚನೆ ಮಾಡುತ್ತೇವೆ ಎಂದು ಈಗಾಗಲೇ ಪಕ್ಷ ಘೋಷಣೆ ಮಾಡಿದೆ.



