ಬೀದರ್: ಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ (೧೦೨) ವಯೋಸಹಜ ಅನಾರೋಗ್ಯದಿಂÀiÁಜಿ ಸದ ಬೀದರ್ನ ಸ್ವಗೃಹದಲ್ಲಿ ಶುಕ್ರವಾರ ರಾತ್ರಿ ನಿಧನರಾದರು. ವಯೋ ಸಂಬAಧಿತ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರಿಗೆ ಮಲ್ಟಿ ಸ್ಪೆಷಾಲಿಟಿ ಅಂಡ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಕೆಲವು ದಿನಗಳ ಕಾಲ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆ ಸೋಮವಾರ ಅವರನ್ನು ಮನೆಗೆ ಕರೆದೊಯ್ದು ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಶುಕ್ರವಾರ ರಾತ್ರಿ ಆರೋಗ್ಯ ಮತ್ತಷ್ಟು ಕ್ಷೀಣಿಸಿದ್ದು, ಕೊನೆಯುಸಿರೆಳೆದಿದ್ದಾರೆ.
ಭೀಮಣ್ಣ ಖಂಡ್ರೆ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ಇಂದೇ ನಡೆಯಲಿದೆ ಎಂದು ಅವರ ಮಗ, ಸಚಿವರೂ ಆಗಿರುವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಭಾಲ್ಕಿಯ ಗಾಂಧಿ ಗಂಜ್ನಲ್ಲಿರುವ ಸ್ವಗೃಹದ ಆವರಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಗಣ್ಯರ ಸಂತಾಪ
ನವದೆಹಲಿ/ಬೆಂಗಳೂರು: ಶತಾಯುಷಿ ಹಾಗೂ ಮಾಜಿ ಸಚಿವ ಭೀಮಣ್ಣ ಖಂಡ್ರೆ (೧೦೨) ಅವರು ನಿನ್ನೆ ವಿಧಿವಶರಾಗಿದ್ದಾರೆ. ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ರಾಜಕೀಯ ಗಣ್ಯರು ಸಂತಾಪ್ ಸೂಚಿಸಿದ್ದು, ಇದೀಗ ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಅವರು ಕೂಡ ಸಂತಾಪ ಸೂಚಿಸಿದ್ದಾರೆ.
ಟ್ವೀಟ್ ನಲ್ಲಿ ರಾಹುಲ್ ಗಾಂಧಿ ಸಂತಾಪಸೂಚಿಸಿದ್ದು ಭೀಮಣ್ಣ ಕಂಡ್ರೆ ಅವರ ನಿಧನ ನನಗೆ ತೀವ್ರ ನೋವು ತಂದಿದೆ. ಅವರು ಸ್ವತಂತ್ರ ಹೋರಾಟಗಾರ ಹಾಗೂ ಶಿಕ್ಷಣ ತಜ್ಞರಾಗಿದ್ದರು. ತಮ್ಮ ಸೇವೆಯನ್ನ ಕರ್ನಾಟಕ ಜನರಿಗೆ ಮುಡುಪಾಗಿಟ್ಟಿದ್ದರು. ಖಂಡ್ರೆ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಆ ಭಗವಂತ ನೀಡಲಿ ಎಂದು ಟ್ವೀಟ್ ಖಾತೆಯ ಮೂಲಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.
ಮಾಜಿ ಸಚಿವರು, ನಾಡಿನ ಹಿರಿಯ ರಾಜಕಾರಣಿಗಳು ಆದ ಭೀಮಣ್ಣ ಖಂಡ್ರೆಯವರ ನಿಧನದಿಂದ ದುಃಖಿತನಾಗಿದ್ದೇನೆ. ಶರಣ ಚಿಂತನೆಗಳ ನೆರಳಂತೆ ಬಾಳಿದ ಧೀಮಂತ ನಾಯಕನ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಅವರು, ಮಹಾತ್ಮಗಾಂಧಿಯವರ ನಾಯಕತ್ವದಲ್ಲಿ ಸ್ವಾತಂತ್ರ÷್ಯ ಹೋರಾಟದಲ್ಲಿ ಭಾಗಿಯಾಗಿದ್ದ ಭೀಮಣ್ಣ ಖಂಡ್ರೆಯವರು ಬಳಿಕ ಕರ್ನಾಟಕ ಏಕೀಕರಣ ಚಳವಳಿಯಲ್ಲೂ ಮುಂಚೂಣಿಯಲ್ಲಿ ಗುರುತಿಸಿಕೊಂಡವರು. ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲೇ ಉಳಿಸಿಕೊಳ್ಳಲು ಟೊಂಕಕಟ್ಟಿ ನಿಂತು, ಆ ಪ್ರಯತ್ನದಲ್ಲಿ ಕೂಡ ಸಫಲರಾದ ಹುಟ್ಟು ಹೋರಾಟಗಾರ.
ಭೀಮಣ್ಣ ಖಂಡ್ರೆಯವರ ಬದುಕಿನ ಹೆಜ್ಜೆಗಳು ಈ ಮಣ್ಣಿನಲ್ಲಿ ಚಿರಸ್ಥಾಯಿ.
ಬದುಕು ಕೊಟ್ಟ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜಕ್ಕಾಗಿ ದುಡಿದ ಸಾರ್ಥಕ ಜೀವಕ್ಕೆ ಅಂತಿಮ ನಮನಗಳು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರು ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರ.ಎ
ಉಪಮುಖ್ಯಮAತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇನ್ನು ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.



