ಲೇಹ್: ಲಡಾಖ್ಗೆ ಸಾಂವಿಧಾನಿಕ ರಕ್ಷಣೆ ಮತ್ತು ರಾಜ್ಯದ ಮಾನ್ಯತೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರಸಿದ್ಧ ಪರಿಸರ ಕಾರ್ಯಕರ್ತ ಮತ್ತು ಶಿಕ್ಷಣ ಸುಧಾರಕ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆದಿದೆ. ಕಳೆದ ಆರು ತಿಂಗಳಿನಿಂದ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಜೈಲಿನಲ್ಲಿದ್ದ ಅವರನ್ನು ಬಿಡುಗಡೆ ಮಾಡಲು ಗೃಹ ಸಚಿವಾಲಯ ಆದೇಶಿಸಿದೆ. ಕಳೆದ ಸೆಪ್ಟೆಂಬರ್ ೨೦೨೫ರಲ್ಲಿ ಲೇಹ್ನಲ್ಲಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ, ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ವಾಂಗ್ಚುಕ್ ಅವರನ್ನು ರಾಜಸ್ಥಾನದ ಜೋಧ್ಪುರ ಜೈಲಿನಲ್ಲಿ ಬಂಧಿಸಿಡಲಾಗಿತ್ತು.
“ಲಡಾಖ್ನಲ್ಲಿ ಶಾಂತಿ, ಸ್ಥಿರತೆ ಮತ್ತು ಪರಸ್ಪರ ನಂಬಿಕೆಯ ವಾತಾವರಣವನ್ನು ನಿರ್ಮಿಸಲು…
ಹಾಗೂ ಪ್ರಾದೇಶಿಕ ಸಮಸ್ಯೆಗಳ ಬಗ್ಗೆ ರಚನಾತ್ಮಕ ಚರ್ಚೆ ನಡೆಸಲು ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
ಲಡಾಖ್ ಅನ್ನು ಸಂವಿಧಾನದ ೬ನೇ ಅನುಸೂಚಿಗೆ ಸೇರಿಸಬೇಕು ಮತ್ತು ಪೂರ್ಣ ಪ್ರಮಾಣದ ರಾಜ್ಯದ ಸ್ಥಾನಮಾನ ನೀಡಬೇಕೆಂದು ವಾಂಗ್ಚುಕ್ ಸುದೀರ್ಘ ಕಾಲದಿಂದ ಅಮರಣಾಂತ ಉಪವಾಸ ಮತ್ತು ಪಾದಯಾತ್ರೆಗಳನ್ನು ನಡೆಸುತ್ತಿದ್ದರು.
ನ್ಯಾಯಾಲಯದ ಹಸ್ತಕ್ಷೇಪ: ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಆಂಗ್ಮೋ ಅವರು ತಮ್ಮ ಪತಿಯ ಬಂಧನವನ್ನು ಪ್ರಶ್ನಿಸಿ ಸುಪ್ರೀಂಕೋಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ವಿಚಾರಣೆ ನಡೆಯುತ್ತಿರುವಾಗಲೇ ಸರ್ಕಾರವೇ ಮುಂದಾಗಿ ಬಂಧನ ಹಿಂಪಡೆದಿದೆ.
ಸೋನಮ್ ವಾಂಗ್ಚುಕ್ ಬಂಧನ ಮುಕ್ತ: ೬ ತಿಂಗಳ ಬಳಿಕ ಎನ್ಎಸ್ಎ ಹಿಂಪಡೆದ ಕೇಂದ್ರ ಸರ್ಕಾರ



