ಬೆಂಗಳೂರು: ಇತ್ತೀಚೆಗಷ್ಟೇ ಅನುಮಾನಾಸ್ಪದ ಸಾವಿಗೀಡಾಗಿದ್ದ ಕೆಎಎಸ್ ಅಧಿಕಾರಿ ಪತ್ನಿಯೂ ಆಗಿರುವ ಹೈಕೋರ್ಟ್ ವಕೀಲರಾದ ಚೈತ್ರಾ ಗೌಡ ಅವರದ್ದು ಕೊಲೆಯಲ್ಲ, ಆತ್ಮಹತ್ಯೆ ಎಂದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಪ್ರಕರಣಕ್ಕೆ ಪುಷ್ಠಿಕೊಡುವಂತೆ ಡೆತ್ ನೋಟ್ ಸಹ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಕಳೆದ ಮೇ 11ರಂದು ವಕೀಲೆ ಚೈತ್ರಾ ಗೌಡ ಸಂಜಯನಗರದ ಅಣ್ಣಯ್ಯಪ್ಪ ಲೇಔಟ್ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಚೈತ್ರಾ ಕುಟುಂಬಸ್ಥರು ಕೊಲೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ಕೆಎಎಸ್ ಅಧಿಕಾರಿ ಶಿವಕುಮಾರ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದರು.
ವಿಚಾರಣೆ ವೇಳೆ ಶಿವಕುಮಾರ್, ಪತ್ನಿಯೊಂದಿಗೆ ಯಾವುದೇ ವೈಷಮ್ಯ ಇರಲಿಲ್ಲ. ಹಣಕಾಸಿನ ತೊಂದರೆಯೂ ಇರಲಿಲ್ಲ. ಆದರೆ ಇತ್ತೀಚೆಗೆ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಿದ್ದರು.ಈ ನಡುವೆ ಕುಟುಂಬಸ್ಥರೊಂದಿಗೆ ಚೈತ್ರಾ ಮಾತನಾಡುವಾಗ ಮೂರು ತಿಂಗಳ ಹಿಂದೆಯೇ ಸಾಯುವ ಮಾತುಗಳನ್ನಾ ಡಿದ್ದರು, ಆಗ ಕುಟುಂಬಸ್ಥರೇ ಧೈರ್ಯ ತುಂಬಿದ್ದರು. ಆನಂತರವೇ ಚೈತ್ರಾ ಹಿಂದೆಯೇ ಡೆತ್ ನೋಟ್ ಬರೆದಿಟ್ಟಿದ್ದ ಮಾಹಿತಿಯೂ ತಿಳಿದುಬಂದಿದೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಸಂಜಯ್ ನಗರದ ಪೊಲೀಸರಿಗೆ, ಮನೆಯಲ್ಲಿ ಸಿಕ್ಕ ಡೆತ್ ನೋಟ್ ಚೈತ್ರಾ ಅವರೇ ಬರೆದಿದ್ದಾರೆ ಅನ್ನೋದು ಕನ್ಫರ್ಮ್ ಆಗಿದೆ. ಮರಣೋತ್ತರ ಪರೀಕ್ಷೆಯಲ್ಲೂ ಆಕೆ ಆತ್ಮಹತ್ಯೆ ಮಾಡಿಕೊಂಡಿರೋದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಂಜಯ್ನಗರ ಪೊಲೀಸರು ತನಿಖೆ ನಡೆಸಿ ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದಾರೆ.