![]() |
![]() |
![]() |
![]() |
![]() |
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಶಿವಮೊಗ್ಗದ ಹುಂಚಕಟ್ಟೆಯಲ್ಲಿ ಅತಿಹೆಚ್ಚು 6 ಸೆ.ಮೀ ಮಳೆಯಾದ ವರದಿಯಾಗಿದೆ. ಚಿಕ್ಕಮಗಳೂರಿನ ಕಮ್ಮರಡಿ ಹಾಗೂ ಜಯಪುರದಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಹಾಸನದ ಶ್ರವಣಬೆಳಗೋಳದಲ್ಲಿ ಸೆಂ.ಮೀ. ಧರ್ಮಸ್ಥಳ, ಅರಕಲಗೊಡು, ಬೆಂಗಳೂರು ನಗರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿರುವ ವರದಿಯಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು. ರಾಮನಗರ, ಮಂಡ್ಯ, ಚಾಮರಾಜನಗರದಲ್ಲಿ ವರುಣನ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ವಿಜಯಪುರ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ರಾಮನಗರ, ಚಾಮರಾಜನಗರ ರಾಯಚೂರು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು, ಕೋಲಾರ. ತುಮಕೂರು, ಕಲಬುರಗಿ ಸೇರಿದಂತೆ ಉತ್ತರ ಕನ್ನಡದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
![]() |
![]() |
![]() |
![]() |
![]() |
Leave a Review