ಬೆಂಗಳೂರು: ಆಸ್ಟ್ರೇಲಿಯಾ ದೇಶಕ್ಕೆ ಚಂದ್ರ. ಎಸ್ ರವರನ್ನು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿ, ಆದೇಶ ಪತ್ರ ನೀಡಲಾಯಿತು. ಚಂದ್ರು ಎಸ್ ರವರು ಮೂಲತಃ ಕರ್ನಾಟಕದ ಬೆಂಗಳೂರಿನವರು. ಪ್ರಸ್ತುತ ಆಸ್ಟ್ರೇಲಿಯಾದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಆಸ್ಟ್ರೇಲಿಯಾದಲ್ಲಿದ್ದುಕೊಂಡೆ ಕನ್ನಡ ತಾಯಿಯ ಸೇವೆಯನ್ನು ಮಾಡುತ್ತಾ, ಅಲ್ಲಿರುವ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷರಾದ ಶಿವಕುಮಾರ್ ನಾಗರ ನವಿಲೆಯವರು ಆಸ್ಟ್ರೇಲಿಯಾ ದೇಶದ ಉಪಾಧ್ಯಕ್ಷರನ್ನಾಗಿ ನೇಮಿಸಿ, ಶುಭ ಕೋರಿದರು.
ಆದೇಶ ಪತ್ರವನ್ನು ಆಸ್ಟ್ರೇಲಿಯಾ ದೇಶದ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷರಾದ ಪ್ರಕೃತಿ ಗುರುರಾಜ್ ರವರು ಚಂದ್ರರವರಿಗೆ ನೀಡುವ ಮೂಲಕ ಅಭಿನಂದನೆಗಳನ್ನು ತಿಳಿಸಿ ಸಂಸ್ಥೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಬೇಕೆಂದು ತಿಳಿಸಿದರು.