ಬೆಂಗಳೂರು: ಟಾಟಾ ಸರಣಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಲಕ್ನೋ ಸೂಪರ್ ಜೈಂಟ್ಸ್ ಪಂದ್ಯ ಇಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ರಾತ್ರಿ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಪಂದ್ಯ ಹಿನ್ನೆಲೆಯಲ್ಲಿ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಡೆಯವರೆಗೆ ರಸ್ತೆ ಬಳಕೆದಾರರ ಅನುಕೂಲ ಮಾಡಿಕೊಡುವ ಸಲುವಾಗಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪಂದ್ಯ ನಡೆಯುವ ಹಿನ್ನೆಲೆಯಲ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ನಿಲಯಗಡೆಯನ್ನು ನಿಷೇಧಿಸಲಾಗಿದೆ. ಆದರೆ ಕ್ರಿಕೆಟ್ ಪ್ರೇಮಿಗಳ ಅನುಕೂಲಕ್ಕಾಗಿ ಸಾರ್ವಜನಿಕ ವಾಹನಗಳ ನಿಲುಗಡೆಗೆ ಕೆಲವು ಸ್ಥಳಗಳನ್ನು ಗುರುತಿಸಲಾಗಿದೆ.ಇಂದು ರಾತ್ರಿ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮಧ್ಯಾಹ್ನ 3 ಗಂಟೆಯಿಂದಲೆ ಕ್ರೀಡಾಂಗಣ ಸುತ್ತಮುತ್ತ ವಾಹನ ನಿಲುಗಡೆ ನಿಷೇಧಿಸಲಾಗಿದೆ. ವಾಹನ ನಿಲುಗಡೆ ನಿಷೇಧವಿರುವ ಸ್ಥಳಗಳು ಹೀಗಿದೆ..
ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಸೆಂಟ್ ಮಾಕ್ರ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.
ಕ್ರಿಕೆಟ್ ಪ್ರೇಮಿಗಳ ವಾಹನ ನಿಲುಗಡೆಗಾಗಿ ಬೆಂಗಳೂರು ಸಂಚಾರ ಪೊಲೀಸ್ ಅಧಿಕಾರಿಗಳು ಕೆಲವು ಸ್ಥಳಗಳನ್ನು ಗುರುತಿಸಿದ್ದಾರೆ.
ವಾಹನ ನಿಲುಗಡೆ ಸ್ಥಳಗಳು ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ನೈದಾನ, ಯು.ಬಿ ಸಿಟಿ ಪಾರ್ಕಿಂಗ್ ಸ್ಥಳ, ಬಿಎಂಟಿಸಿ ಬಸ್ ನಿಲ್ದಾಣದ ಮೊದಲನೆ ಮಹಡಿ ಮತ್ತು ಓಲ್ಡ್ ಕೆಜಿಐಡಿ ಬಿಲ್ಡಿಂಗ್, ಕಿಂಗ್ಸ್ ರಸ್ತೆಯಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.