ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಬಿಟ್ಕಾಯಿನ್ ಹಗರಣದ ತನಿಖೆ ತೀವ್ರಗೊಂಡಿದ್ದು, ಯುವ ಕಾಂಗ್ರೆಸ್ ಪ್ರಮುಖ ಮೊಹಮ್ಮದ್ ನಲಪಾಡ್ ಅವರಿಗೆ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ ನ್ಯಾಯಾಲಯಕ್ಕೆ ಸುದೀರ್ಘ ಚಾರ್ಜ್ಶೀಟ್ ಸಲ್ಲಿಸಿದ್ದು, ಇದರಲ್ಲಿ ನಲಪಾಡ್ ಅವರಿಗೆ ಕೋಟ್ಯಂತರ ರೂಪಾಯಿ ಹಣ ಸಂದಾಯವಾಗಿರುವ ಬಗ್ಗೆ ಆಘಾತಕಾರಿ ವಿಚಾರ ಉಲ್ಲೇಖ ಮಾಡಲಾಗಿದೆ. ಹ್ಯಾಕರ್ ಶ್ರೀಕಿ ಜೊತೆಗಿನ ನಲಪಾಡ್ ಹಣಕಾಸು ವ್ಯವಹಾರಗಳು ಈಗ ಅಧಿಕೃತವಾಗಿ ದೋಷಾರೋಪ ಪಟ್ಟಿಯಲ್ಲಿ ದಾಖಲಾಗಿವೆ.ಎಸ್ಐಟಿ ಸಲ್ಲಿಸಿರುವ ಚಾರ್ಜ್ಶೀಟ್ ಪ್ರಕಾರ, ಮುಖ್ಯ ಆರೋಪಿ ಹಾಗೂ ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ…



