ದೇವನಹಳ್ಳಿ: ತಾಲ್ಲೂಕಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ಲಿಮಿಟೆಡ್ ಕಂಪನಿ ವತಿಯಿಂದ ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ಪ್ರದೇಶದಲ್ಲಿ ರಸಾಯನಿಕ ಸೋರಿಕೆ ಸ್ಪಂದನ ಮತ್ತು ಮೌಲ್ಯೀಕರಣ ಬಗ್ಗೆ ಅಣುಕು ಪ್ರದರ್ಶನ ಕಾರ್ಯಕ್ರಮ ನಡೆಸಲಾಯಿತು.
ಇದು ಕೇವಲ ಅಣುಕು ಪ್ರದರ್ಶನವಾಗಿದ್ದು ಎಲ್ಲಾ ಇಲಾಖೆಗಳು ವಿಪತ್ತುಗಳು ಸಂಭವಿಸಿದಾಗ ಸರ್ವಸನ್ನದ್ಧರಾಗಿರಲು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಈ ಅಣುಕು ಪ್ರದರ್ಶನ ನೈಜ ಘಟನೆಯಂತೆ ನಡೆಸಲಾಗಿದ್ದು ವಿಪತ್ತು ಸಂಭವಿಸಿದಾಗ ಇಲಾಖೆಗಳ ಜವಾಬ್ದಾರಿ ಯನ್ನು ಪ್ರತ್ಯಕ್ಷವಾಗಿ ತಿಳಿಸಲು ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಅಣುಕು ಪ್ರದರ್ಶನದಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿರುವುದಿಲ್ಲ.
ಈ ಕಾರ್ಯಕ್ರಮದಲ್ಲಿ ಕಾರ್ಖಾನೆಗಳು ಮತ್ತು ಬಾಯ್ಲರ್ ಇಲಾಖೆ ಉಪನಿರ್ದೇಶಕ ಸೋಮಶೇಖರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರು ಬಸವರಾಜು ವಿ, ಎನ್.ಡಿ.ಆರ್.ಫ್(NDRF) ಮುಖ್ಯಸ್ಥರಾದ ಅಖಿಲೇಶ್, ಅಗ್ನಿಶಾಮಕ ದಳದ ಅಧಿಕಾರಿ ರವಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ತರಬೇತಿ ಸಂಯೋಜಕ ರಘು, ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ಲಿಮಿಟೆಡ್ ನ ಪ್ರಧಾನ ವ್ಯವಸ್ಥಾಪಕ ಹರಿರಾಮ್, ಎಸ್ಟರ್ ಆಸ್ಪತ್ರೆಯ ಮುಖ್ಯಸ್ಥ ಪ್ರದೀಪ್ ಸಿನಃ, ಜಿಲ್ಲಾ ಮಟ್ಟದ ಅಧಿಕಾರಿಗಳು, ಇಂಡಿಯನ್ ಆಯಿಲ್ ಸ್ಕೈಟ್ಯಾಂಕಿಂಗ್ ಲಿಮಿಟೆಡ್ ನ ಸಿಬ್ಬಂದಿ ಉಪಸ್ಥಿತರಿದ್ದರು.