ಬೆಂಗಳೂರು: ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯ ನಿರ್ವಹಿಸುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.ಈ ಸಂಬಂಧ ಟ್ವಿಟ್ ಮಾಡಿರುವ ಅವರು, ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ (ಜಾರಿ ನಿರ್ದೇಶನಾಲಯ) ದಾಳಿ ಸಾಕ್ಷಿ ಎಂದಿದ್ದಾರೆ.
ಬಿಜೆಪಿ ಸರ್ಕಾರದ ಸ್ವಾರ್ಥ ರಾಜಕೀಯದ ಮೇರೆ ಮೀರಿದೆ ಎಂದು ಗುಡುಗಿದ್ದಾರೆ.ವಿಪಕ್ಷಗಳು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣಸಬೇಕಿರುವುದು ಮಾತ್ರವಲ್ಲ ಐಟಿ, ಸಿಬಿಐ, ಇಡಿ ಸಂಸ್ಥೆಗಳ ವಿರುದ್ಧವೂ ಹೋರಾಡಬೇಕಾದ ಅನಿವಾರ್ಯತೆ ಬಂದಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಅವಸಾನದ ಹಾದಿಗೆ ಸರಿಯುತ್ತಿದೆ ಎಂದಿದ್ದಾರೆ.