ಬೆಂಗಳೂರು: ನಗರದ ಹೊರವಲಯ ಆನೇಕಲ್ ಬಳಿ ನಿರ್ಮಾಣವಾಗಲಿರುವ ಹೊಸ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಲಾನ್ಯಾಸ ನೆರವೇರಿಸಲಿದ್ದಾರೆ. 80 ಸಾವಿರ ಆಸನ ಸಾಮರ್ಥ್ಯ ಹೊಂದಿರುವ ಈ ಕ್ರೀಡಾಂಗಣ, ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ಬಳಿಕ ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಆಗಲಿದೆ. ಸುಮಾರು 943 ಕೋಟಿ ವೆಚ್ಚದ ಈ ಯೋಜನೆ ಮುಂದಿನ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ.ನೂತನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಸೂರ್ಯನಗರ 4ನೇ ಹಂತದಲ್ಲಿ (ಇಂಡ್ಲವಾಡಿ ಗ್ರಾಮ) ನಿರ್ಮಾಣವಾಗಲಿದೆ. ಕರ್ನಾಟಕ ಗೃಹ ಮಂಡಳಿ ವತಿಯಿಂದ `ಕೆಎಚ್ಬಿ ಸೂರ್ಯ ಕ್ರೀಡಾ ಗ್ರಾಮ’ ಯೋಜನೆಯಡಿ ಈ ಬೃಹತ್ ಕ್ರೀಡಾಂಗಣವನ್ನು ನಿರ್ಮಿಸಲಾಗುತ್ತಿದೆ.
ಆಧುನಿಕ ಸೌಲಭ್ಯಗಳು, ಹಾಸ್ಪಿಟಾಲಿಟಿ ಲೌಂಜ್ಗಳು, ವಿಐಪಿ ಬಾಕ್ಸ್ಗಳು ಹಾಗೂ ಮೀಡಿಯಾ ಸೌಲಭ್ಯಗಳನ್ನು ಒಳಗೊಂಡAತೆ ಪ್ರೇಕ್ಷಕರ ಅನುಭವವನ್ನು ಉತ್ತಮಗೊಳಿಸುವ ವ್ಯವಸ್ಥೆಗಳು ಇರಲಿವೆ. ಜೊತೆಗೆ ಭಾರಿ ಜನಸ್ತೋಮ ನಿರ್ವಹಣೆಗೆ ಅಗತ್ಯವಾದ ಸುರಕ್ಷತಾ ವ್ಯವಸ್ಥೆಗಳನ್ನೂ ಈ ಕ್ರೀಡಾಂಗಣ ಹೊಂದಿರಲಿದೆ.ನಗರದ ಹೃದಯಭಾಗದಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣವು ಕೇವಲ 32 ಸಾವಿರ ಆಸನ ಸಾಮರ್ಥ್ಯ ಹೊಂದಿದ್ದು, ಅಂತಾರಾಷ್ಟ್ರೀಯ ಪಂದ್ಯಗಳು ಹಾಗೂ IPಐ ಪಂದ್ಯಗಳಿಗೆ ಇದು ಸಾಕಾಗುತ್ತಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಹೀಗಾಗಿ ನೂತನ ಕ್ರೀಡಾಂಗಣವನ್ನು ಬಹಳ ದೊಡ್ಡದಾಗಿ 75 ಏಕರೆ ಜಾಗದಲ್ಲಿ ನಿರ್ಮಿಸಲು ಯೋಜಿಲಾಗಿದ್ದು, ಸ್ಟೇಡಿಯಂನಲ್ಲಿ 80 ಸಾವಿರ ಜನರಿಗೆ ಆಸನ ವ್ಯವಸ್ಥೆ ಇರಲಿದೆ. ಆ ಮೂಲಕ ಇದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕಿAತ ಎರಡು ಪಟ್ಟು ದೊಡ್ಡದಾಗಿರಲಿದೆ.
ಸ್ಟೇಡಿಯಂ ಯೋಜನೆ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಮಾತ್ರವಲ್ಲದೆ ಕರ್ನಾಟಕದಲ್ಲಿ ಕ್ರೀಡೆಗಳ ಉತ್ತೇಜನ ಸಂಬAಧವೂ ಮಹತ್ವದ ಪಾತ್ರವಹಿಸಲಿದೆ. ಕ್ರಿಕೆಟ್ ತರಬೇತಿ ಕೇಂದ್ರಗಳು, ಯುವಕರ ಕ್ರೀಡಾ ಕಾರ್ಯಕ್ರಮಗಳಿಗೆ ಇದು ವೇದಿಕೆಯಾಗಲಿದೆ. ಶಾಲೆ, ಕಾಲೇಜು ಹಾಗೂ ರಾಜ್ಯ ಮಟ್ಟದ ಕ್ರೀಡಾಕೂಟಗಳಿಗೂ ಅವಕಾಶ ಕಲ್ಪಿಸುವ ಮೂಲಕ ಸ್ಥಳೀಯ ಪ್ರತಿಭೆಗಳನ್ನು ಬೆಳೆಸುವ ಉದ್ದೇಶ ಹೊಂದಲಾಗಿದೆ. ಕ್ರಿಕೆಟ್ ಮಾತ್ರವಲ್ಲದೆ, ಈ ಸ್ಟೇಡಿಯಂನ್ನು ಬಹುಉದ್ದೇಶೀಯ ವೇದಿಕೆಯಾಗಿ ರೂಪಿಸುವ ಯೋಜನೆಯೂ ಇದೆ. ಸಂಗೀತ ಕಾರ್ಯಕ್ರಮಗಳು, ಸಮ್ಮೇಳನಗಳು, ಸಾರ್ವಜನಿಕ ಸಭೆಗಳು, ಕಾರ್ಪೊರೇಟ್ ಕಾರ್ಯಕ್ರಮಗಳು ಹಾಗೂ ಪ್ರದರ್ಶನಗಳಿಗೂ ಇದನ್ನು ಬಳಸುವ ಉದ್ದೇಶವಿದೆ.
ಆನೇಕಲ್ ಬಳಿ ಹೊಸ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಲಾನ್ಯಾಸ



