ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ದಿನಕ್ಕೊಂದು ತಿರುವು ಪಡೆಯುತ್ತಿವೆ. ಪಕ್ಷದಲ್ಲಿ ಸಚಿವರು ಶಾಸಕರು ನೀಡುತ್ತಿರುವ ಹೇಳಿಕೆಗಳು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿವೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಸೋದರನೊಮದಿಗೆ ದೆಹಲಿಗೆ ತೆರಳಿಗೆ ಪಕ್ಷದ ಪ್ರಮುಖರನ್ನು ಭೇಟಿ ಮಾಡಿ ಎರಡು ಮೂರು ದಿನಗಳ ಕಾಲ ದೆಹಲಿಯಲ್ಲೇ ಇದ್ದರು. ದೆಹಲಿಯಿಂದ ವಾಪಸ್ ಆದ ನಂತರ ಯಾವುದೇ ವಿಷಯವನ್ನು ಬಹಿರಂಗ ಪಡಿಸದ ಡಿಕೆ ಅವರು, ಎಲ್ಲಾವಿಷಯಗಳು ಸಮಯ ಬಂದಾಗ ಗೊತ್ತಾಗುತ್ತದೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.
ಇದರ ಮಧ್ಯೆ ಮುಖ್ಯಮಂತ್ರಿಯವರು ಯಾವುದೇ ಹೇಳಿಕೆಗಳಿಗೂ ಯಾವುದೇ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ತಮ್ಮ ಆಪ್ತ ಸಚಿವ ಶಾಸಕರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಆ ಸಭೆಯಲ್ಲೂ ಸಹ ಮನಬಿಚ್ಚಿ ಸಂಪೂರ್ಣವಾಗಿ ಯಾವುದೇ ವಿಷಯವನ್ನು ಬಹಿರಂಗ ಪಡಿಸದೆ ಜಾಣತನ ಮೆರೆದಿದ್ದಾರೆ.
ಒಟ್ಟಾರೆ ಮುಖ್ಯಮಂತ್ರಿಯವರು
ನಾಯಕತ್ವ ಬದಲಾವಣೆ ಸಂಬAಧ ನಡೆಯುತ್ತಿರುವ ವಿದ್ಯಮಾನಗಳ ಹಿನ್ನೆಲೆಯಲ್ಲಿ ಯಾವುದೇ ವಿಷಯಕ್ಕೂ ಪ್ರತಿಕ್ರಿಯೆ ನೀಡದೆ ಇರುವುದು ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಸಿಎಂ ನಡೆ ನಿಗೂಢ ಆಪ್ತ ಸಚಿವರ ಸಮಾಲೋಚನೆ ಸಭೆಯಲ್ಲೂ ಗುಟ್ಟು ಬಹಿರಂಗ ಪಡಿಸದ ಮುಖ್ಯಮಂತ್ರಿ



