ಬೆಂಗಳೂರು: ಬೆಂಗಳೂರಿನ ಬ್ರೂಕ್ಫೀಲ್ಡ್ ನಲ್ಲಿರುವ ಕೇಪ್ಜೆಮಿನಿ ಹೆಚ್ಎಎಲ್ ಕ್ಯಾಂಪಸ್ ಆವರಣದ ಸೊಸೈಟಿ ಜನರಲ್ ಬೇಬಿ ಕೇರ್ (ಡೇ ಕೇರ್) ಕೇಂದ್ರದಲ್ಲಿ ಪುಟ್ಟ ಮಕ್ಕಳ ಮೇಲೆ ಸಿಬ್ಬಂದಿ ಅಮಾನವೀಯವಾಗಿ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಅಮಾನವೀಯ ದೃಶ್ಯಗಳ ವಿಡಿಯೋ ಆಧಾರದ ಮೇಲೆ ಮಕ್ಕಳ ಸಹಾಯವಾಣಿ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಹೆಚ್ಎಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದ ಗಾಂಭೀರ್ಯತೆಯನ್ನು ಅರಿತ ಪೊಲೀಸರು ತಕ್ಷಣವೇ ಡೇ ಕೇರ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಘಟನೆಗೆ ಸಂಬAಧಿಸಿದAತೆ ಇಬ್ಬರು ಆರೋಪಿ ಸಿಬ್ಬಂದಿಯನ್ನು ಬಂಧಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ ಹಾಗೂ ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯಡಿ ಕಠಿಣ ಮೊಕದ್ದಮೆ ಹೂಡಲಾಗಿದೆ.



