ಹಾವೇರಿ: ಮನೆಯ ಮುಂದೆ ನಿಂತಿದ್ದ 2 ವರ್ಷದ ಮಗುವಿನ ಮೇಲೆ ಟ್ರ್ಯಾಕ್ಟರ್ ಹರಿದು ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ ನಡೆದಿದೆ.
ಮೃತ ಮಗುವನ್ನ ರಬೀಯಾ ದೊಡ್ಡಮನಿ 2 ವರ್ಷ ವಯಸ್ಸು ಎಂದು ಗುರುತಿಸಲಾಗಿದೆ.
ಮನೆಯ ಮುಂದೆ ನಿಂತಿದ್ದ ಮಗುವಿನ ಮೇಲೆ ಏಕಾಏಕಿ ಟ್ರ್ಯಾಕ್ಟರ್ ಹರಿದು ಸಾವನ್ನಪ್ಪಿದೆ. ಟ್ರಾ÷್ಯಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.



