ಬೆಂಗಳೂರು: ತೆರಿಗೆ ವಂಚನೆಗೆ ಸಂಬಂಧಿಸಿ ಆಭೂಷಣ್ ಜ್ಯುವೆಲರ್ಸ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯ ವೇಳೆ ಇಬ್ಬರು ಬಾಲ ಕಾರ್ಮಿಕರನ್ನು ಇಟ್ಟುಕೊಂಡಿರುವುದು ಪತ್ತೆಯಾಗಿದ್ದು, ಮತ್ತೊಂದು ಎಫ್ಐಆರ್ ದಾಖಲು ಮಾಡಲಾಗಿದೆ.
ಆಭೂಷಣ್ ಜ್ಯುವೆಲರ್ಸ್ ಮೇಲೆ ದಾಳಿ ವೇಳೆ ಐಟಿ ಅಧಿಕಾರಿಗಳಿಂದ ಇಬ್ಬರು ಮಕ್ಕಳ ರಕ್ಷಣೆ ಮಾಡಲಾಗಿದೆ. ಕಳೆದ ಮೂರು ದಿನಗಳಿಂದ ಮಳಿಗೆಗಳ ಹಾಗೂ ಲೆಕ್ಕಪತ್ರಗಳ ಪರಿಶೀಲನೆನಡೆದಿದೆ. ಜ್ಯುವೆಲರ್ಸ್ನ ಮಾಲಿಕರ ಜಯನಗರದ ಮನೆಯಲ್ಲೂ ಪರಿಶೀಲನೆ ವೇಳೆ ಇಬ್ಬರು ಅಪ್ರಾಪ್ತ ಬಾಲಕಿಯರು ಪತ್ತೆಯಾಗಿದ್ದರು.
ಸುಮಾರು 10 ಹಾಗೂ 8 ವರ್ಷದ ಇಬ್ಬರು ಬಾಲ ಕಾರ್ಮಿಕರು ಪತ್ತೆಯಾಗಿದ್ದು, ಈ ಬಗ್ಗೆ ಪೊಲೀಸರಿಗೆ ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಾಲಿಕರಾದ ಅಶೋಕ್ ಕುಮಾರ್, ಶ್ರೇಯಸ್ ಚೌಡರೆ ಮತ್ತು ಗೌರವ್ ಚೌಡರೆ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.