ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಡ್ರಗ್ ಮಾಫಿಯಾಗಳ ಜಾಲಕ್ಕೆ ಮಕ್ಕಳು ಮತ್ತು ಯುವ ಸಮುದಾಯ ಬಲಿಯಾಗುತ್ತೀರುವುದಕ್ಕೆ ಸಂಬAಧಿಸಿದ ಇತ್ತೀಚಿನ ದಿನಗಳಲ್ಲಿ ಬೆಳಕಿಗೆ ಬರುತ್ತೀರುವ ಹಾಗೂ ದಾಖಲಾಗುವ ಪ್ರಕರಣಗಳು ಸಾಕ್ಷೀಯಾಗುತ್ತಿವೆ. ಇದರ ನಿಯಂತ್ರಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ವಿ.ಚಂದ್ರಕಾಂತ್ ಕರೆ ನೀಡಿದರು.ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಅಂಗವಾಗಿ ಗುರುವಾರ ಜಿಲ್ಲಾ ಪೊಲೀಸ್ ಇಲಾಖೆವತಿಯಿಂದ ಆಯೋಜಿಸಿದ್ದ ಮಾದಕ ವಸ್ತು ಮುಕ್ತ ಸಮಾಜಕ್ಕಾಗಿ ಜಾಗೃತಿ ಅಭಿಯಾನದ ಮ್ಯಾರಥಾನ್ಗೆ ಚಾಲನೆ ನೀಡಿ ಮಾತನಾಡಿದರು.‘ಇಂದಿನ ಮಕ್ಕಳೇ ನಾಳಿನ ಪ್ರಜೆಗಳು, ಶ್ರಮಿಕ ವರ್ಗ ಈ ದೇಶದ ಸಂಪತ್ತು. ನಮ್ಮ ಅಧ್ಯಯನದ ಪ್ರಕಾರ ಡ್ರಗ್ ಮಾಫಿಯಾಗಳಿಗೆ ಮಕ್ಕಳು ಮತ್ತು ದುಡಿಯುವ ವರ್ಗವೇ ಗುರಿಯಾಗಿದೆ. ಇದರ ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಬೇಕು. ಅಪಾಯದ ಬಗ್ಗೆ ಜಾಗೃತಿ ಮೂಡಿಸಬೇಕು. ಸಾಮಾಜಿಕ ಜಾಲತಾ-ಣಗಳಲ್ಲೂ ಕೂಡ ಇದರ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದರು.ನಗರದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಿಂದ ಆರಂಭವಾದ ಮ್ಯಾರಥಾನ್ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡಿತು. 5 ಕಿ.ಮೀ ಮ್ಯಾರಥಾನ್ನಲ್ಲಿ ನೂರಾರು ವಿದ್ಯಾರ್ಥಿಗಳು, ಯುವಕರು, ಪೋಷಕರು, ಮ್ಯಾರಥಾನ್ ಹಾಗೂ ಪೊಲೀಸ್ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.ಡಿವೈಎಸ್ಪಿ ಪಾಂಡುರಂಗ ಮಾತನಾಡಿದರು. ಗ್ರಾಮಾಂತರ ಪೊಲೀಸ್ ಠಾಣೆ ಇನ್ಸೆ÷್ಪಕ್ಟರ್ ಎಂ.ಬಿ. ನವೀನ್ಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು.ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ, ತಾಲೂಕಿನ ವಿವಿಧ ಪೊಲೀಸ್ ಠಾಣೆಗಳ ಇನ್ಸೆ÷್ಪಕ್ಟರ್ ಗಳಾದ ಅಮರೇಶಗೌಡ,ಕಲ್ಲಪ್ಪ, ಮುತ್ತುರಾಜ್, ಶ್ರೀನಿವಾಸ್, ಲಕ್ಷ್ಮೀ ನಾರಾಯಣ, ಶಬರೀಶ್ ಇದ್ದರು.*ಮಹಿಳೆಯರ ಸುರಕ್ಷತೆಗೆ ಒತ್ತು*ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಪ್ರತಿ ಮನೆಗಳಿಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಸಮಸ್ಯೆ ಆಲಿಸಲಾಗು-ತ್ತಿದೆ. ಒಂಟಿ ಮನೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮಹಿಳೆಯರ ಸುರಕ್ಷತೆಯ ಬಗ್ಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಬೆ.ಗ್ರಾಮಾಂತರ ಜಿಲ್ಲಾ ಎಸ್.ಪಿ ಎಂ.ವಿ ಚಂದ್ರಕಾತ್ ತಿಳಿಸಿದರು.ಆಸರೆ ಯೋಜನೆಯ ಮೂಲಕ ಒಂಟಿಯಾಗಿರುವ ಹಿರಿಯರಿಗೆ ರಕ್ಷಣೆ ನೀಡುವ ಜತೆಗೆ ಸರ್ಕಾರದ ಯೋಜನೆ ತಲುಪಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.
ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಮಕ್ಕಳು,ಯುವಕರು, ಶ್ರಮಿಕ ವರ್ಗ ಡ್ರಗ್ಸ್ ಮಾಫಿಯಾದ ಗುರಿ ಹೆಚ್ಚುತ್ತಿರುವ ಮಾದಕ ವಸ್ತು ಸಂಬಂಧಿತ ಪ್ರಕರಣ



