ಕನಕಪುರ: ಪೋಷಕರ ಸಭೆಯನ್ನು ನಡೆಸುವ ಮೂಲಕ ಶಾಲೆಯಲ್ಲಿ ಮಕ್ಕಳೊಂದಿಗೆ ಪೋಷಕರ ಸಮಾಗಮಕ್ಕೆ ಸಾಕ್ಷಿಯಾಗುವ ಮೂಲಕ ನಗರದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ನಗರದ ಬಾಣಂತ ಮಾರಮ್ಮ ದೇವಾಲಯದ ಆವರಣ ದಲ್ಲಿರುವ ನೂತನ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಶಾಲಾ ಮಕ್ಕಳ ಕೈಯಿಂದ ದೀಪ ಬೆಳಗಿಸುವ ಮೂಲಕ ಬಹಳ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ನೆರವೇರಿಸಲಾಯಿತು,ಶಾಲಾ ಮುಖ್ಯ ಶಿಕ್ಷಕಿ ಮಂಜುಳಾ ಕೆ ಜಿ ರವರು ಪೋಷಕರು, ಮಕ್ಕಳು ಮತ್ತು ಶಿಕ್ಷಕರಿಗೆ ದೇಶದ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು, ಮಕ್ಕಳ ಕಲಿಕಾ ಚಟುವಟಿಕೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ನಂತರ ಕಲಿಕಾ ಪ್ರಗತಿಯ ಯೋಜನೆಗಳ ಕುರಿತಂತೆ ಪೋಷಕರಿಗೆ ಮಾಹಿತಿಯನ್ನು ನೀಡಿ ಮುಂದಿನ ದಿನಗಳಲ್ಲಿ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆಯಲ್ಲಿ ಮತ್ತಷ್ಟು ಉತ್ತಮ ಯೋಜನೆಗಳನ್ನು ರೂಪಿಸುವ ನಿಟ್ಟಿ ನಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಶಿಕ್ಷಕರ ನಡುವೆಮಸಮನ್ವಯತೆ ಕುರಿತಂತೆ ಚರ್ಚಿಸಲಾಯಿತು, ಶಾಲೆಯ ಎಲ್ಲಾ ಶಿಕ್ಷಕ ವೃoದವರು ಹಾಗೂ ಪೋಷಕರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಸಾರ್ವಜನಿಕರು ಈ ಒಂದು ಸಮಾರಂಭಕ್ಕೆ ಸಾಕ್ಷಿಯಾದರು.
ನಗರಸಭಾ ಸದಸ್ಯ ಸ್ಟುಡಿಯೋ ಚಂದ್ರು, ಎbಸಿಬಿಯ ಬಂಡಿ ನಾಗರಾಜ್, ಎಸ್ಡಿಎಂಸಿ ಅಧ್ಯಕ್ಷೆ ಶ್ರೀಮತಿ ಭಾನುಮತಿ,ಶಾಲಾ ಸಿಬ್ಬಂದಿಗಳು.ಪೋಷಕರಾದ ರಾಜು ಶಿವಕುಮಾರ್ ಸೇರಿದಂತೆ ಮಕ್ಕಳ ಎಲ್ಲಾ ಪೋಷಕರು ಸಭೆಯಲ್ಲಿ ಭಾಗವಹಿಸಿದರು.



