ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ (ಡಿಸಿಸಿ) ನೂತನ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕ ಹಾಗೂ ಕರ್ನಾಟಕ ಸಣ್ಣಕೈಗಾರಿ ಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ.ರಘುಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಸಚಿವ ಡಿ.ಸುಧಾಕರ್ ಅವರ ಅಕಾಲಿಕ ನಿಧನದ ಹಿನ್ನಲೆಯಲ್ಲಿ, ಸಹಕಾರ ಸಂಘಗಳ ಕಾಯ್ದೆ ಪ್ರಕಾರ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ನೂತನ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾ ರೆ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್ ಉಲ್ಲಾ ಷರೀಪ್ ಘೋಷಿಸಿದರು.ಬ್ಯಾಂಕಿನ ಪ್ರಸ್ತುತ ಆಡಳಿತ ಮಂಡಳಿಗೆ ಇನ್ನು 3 ವರ್ಷ 4ತಿಂಗಳ ಅಧಿ ಕಾಲವಧಿ ಬಾಕಿ ಉಳಿದಿದೆ. ಅಂದರೆ, 2029ರ ಸೆಪ್ಟೆಂಬರ್ ತಿಂಗಳವ ರೆಗೆ ಈ ಬ್ಯಾಂಕ್ ಆಡಳಿತ ಮಂಡಳಿಯ ಅವಧಿ ಇರಲಿದ್ದು, ಅಲ್ಲಿಯವ ರೆಗೂ ನೂತನ ಅಧ್ಯಕ್ಷರು ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ ಎಂದು ತಿಳಿಸಿದರು.ರೈತಸ್ನೇಹಿ ಆಡಳಿತದ ಭರವಸೆ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ನೂತನ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿ ಅಧಿಕಾರ ಸ್ವೀಕರಿಸಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಬ್ಯಾಂಕ್ನ ಪ್ರಗತಿ ಹಾಗೂ ರೈತ ರ ಹಿತರಕ್ಷಣೆಗೆ ಬದ್ಧವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.1955 ರಲ್ಲಿ ಪ್ರಾರಂಭವಾದ ಡಿಸಿಸಿ ಬ್ಯಾಂಕ್, ಕಳೆದ ಸುಮಾರು 70 ವ ರ್ಷಗಳಿಂದ ಜಿಲ್ಲೆಯ ರೈತಾಪಿ ವರ್ಗದ ಹಿತ ಕಾಯುವಲ್ಲಿ ಯಶಸ್ವಿಯಾ ಗಿದೆ. ರಾಜ್ಯದಲ್ಲಿರುವ 21 ಡಿಸಿಸಿ ಬ್ಯಾಂಕ್ಗಳ ಪೈಕಿ ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಅತ್ಯುತ್ತಮ ಆರ್ಥಿಕ ಪರಿಸ್ಥಿತಿಯಲ್ಲಿದೆ,ಜಿಲ್ಲಾ ಕೇಂದ್ರದ ಮು ಖ್ಯ ಕಚೇರಿ ಸೇರಿದಂತೆ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ಒಟ್ಟು 22 ಶಾಖೆಗಳನ್ನು ಬ್ಯಾಂಕ್ ಹೊಂದಿದೆ. ಬ್ಯಾಂಕ್ನಲ್ಲಿ ಒಟ್ಟು160 ಮಂಜೂರಾದ ಹುದ್ದೆಗಳಿದ್ದು, ಸದ್ಯ 151 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೇವಲ 9 ಹುದ್ದೆಗಳು ಮಾತ್ರ ಖಾಲಿ ಇವೆ.
ಹಿರಿಯೂರು, ಮೊಳಕಾಲ್ಮುರು ಹಾಗೂ ಹೊಸದುರ್ಗ ತಾಲ್ಲೂಕುಗಳಲ್ಲಿ ಬ್ಯಾಂಕ್ ಸದ್ಯ ಸ್ವಂತ ಕಟ್ಟಡವನ್ನು ಹೊಂದಿದೆ. ಒಟ್ಟು 422 ಸಹಕಾರ ಸಂಘಗಳು ಬ್ಯಾಂಕ್ನ ಸದಸ್ಯತ್ವ ಹೊಂದಿವೆ,ಬ್ಯಾAಕ್ನ ಒಟ್ಟು ಶೇರು ಬಂಡವಾಳ ?106,26 ಕೋಟಿಗಳಾಗಿದ್ದು, ಇದರಲ್ಲಿ ಸರ್ಕಾರದ ಪಾಲು ?1.41ಕೋಟಿಗಳಾಗಿದೆ ಎಂದು ತಿಳಿಸಿದರು.
ಕಳೆದ 202526ನೇಆರ್ಥಿ ಕ ವರ್ಷದಲ್ಲಿ ಕೃಷಿ ಉದ್ದೇಶಗಳಿಗಾಗಿ, ರಾಜ್ಯ ಸರ್ಕಾರದ ಶೂನ್ಯ ಬಡ್ಡಿದರ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಜಿಲ್ಲೆಯ 56,263 ರೈತರಿಗೆ ಒಟ್ಟು 496 ಕೋಟಿ ಅಲ್ಪಾವಧಿ ಬೆಳೆ ಸಾಲ ವಿತರಣೆ ಮಾಡಲಾಗಿದೆ.ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಒಟ್ಟಾರೆಯಾಗಿ 115 ಕೋಟಿ ಸಾಲ ನೀಡಲಾಗಿದೆ. ರಾಜ್ಯ ಸರ್ಕಾರದ ಯೋಜನೆ ಅಡಿಯಲ್ಲಿ ಶೂನ್ಯ ಬಡ್ಡಿ ದರದಲ್ಲಿ 619 ರೈತರಿಗೆ ?35 ಕೋಟಿ ಸಾಲ ಸೌಲಭ್ಯ ಕಲ್ಪಿಸಲಾಗಿದೆ. ಕಳೆದ ವರ್ಷ ಬ್ಯಾಂಕ್ ಒಟ್ಟು 106 ಕೋಟಿ ವಹಿವಾಟು ನಡೆಸಿದ್ದು, ಎಲ್ಲಾ ವೆಚ್ಚಗಳನ್ನು ಕಳೆದು ಸುಮಾರು 10 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಸಂತಸವ್ಯಕ್ತಪಡಿಸಿದರು. 2026 -27ನೇ ಸಾಲಿಗೆ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಹಮ್ಮಿಕೊಳ್ಳ ಲಾಗಿದ್ದು, ಶೂನ್ಯ ಬಡ್ಡಿ ದರದಲ್ಲಿ ಜಿಲ್ಲೆಯ 60,000 ರೈತರಿಗೆ ಒಟ್ಟು 5 58 ಕೋಟಿ ಅಲ್ಪಾವಧಿ ಬೆಳೆ ಸಾಲ ವಿತರಣೆ ಮಾಡುವ ಗುರಿಹೊಂದಲಾಗಿದೆ.
ಇದರಲ್ಲಿ ಪರಿಶಿಷ್ಟ ಜಾತಿಯ 7,152 ರೈತರಿಗೆ 70.75 ಕೋಟಿ ಹಾಗೂ ಪರಿಶಿಷ್ಟ ಪಂಗಡದ 8,344 ರೈತರಿಗೆ 76 ಕೋಟಿ ಸಾಲ ನೀಡಲು ಕಾಯ್ದಿರಿಸಲಾಗಿದೆ. ರೈತರ ಆರ್ಥಿಕ ಸಬಲೀಕರಣವೇ ನಮ್ಮ ಬ್ಯಾಂಕ್ನ ಮೂಲ ಉದ್ದೇಶವಾಗಿದ್ದು, ಮುಂಬರುವ ದಿನಗಳಲ್ಲಿ ಇನ್ನಷ್ಟು ಜನಪರ ಯೋಜನೆಗಳ ಮೂಲಕ ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಅನ್ನು ರಾಜ್ಯದ ಲ್ಲೇ ಮಾದರಿ ಸಹಕಾರಿ ಬ್ಯಾಂಕ್ ಆಗಿ ರೂಪಿಸಲಾಗುವುದು ಎಂದು ಟಿ. ರಘುಮೂರ್ತಿ ಅವರು ವಿಶ್ವಾಸ ವ್ಯಕ್ತಪಡಿಸಿದರು.
ನಿವೃತ್ತ ನೌಕರರಿಗೆ ಪಿಂಚಣಿ ವ್ಯವಸ್ಥೆ: ಬ್ಯಾಂಕಿನಲ್ಲಿ ಸುದೀರ್ಘ ಸೇವೆ ಸ ಲ್ಲಿಸಿ ನಿವೃತ್ತರಾಗುವ ನೌಕರರ ಕಲ್ಯಾಣಕ್ಕಾಗಿ ವಿಶೇಷ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ನೂತನ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ತಿ ಳಿಸಿದರು.ಬ್ಯಾಂಕಿನ ಲಾಭಾಂಶದಲ್ಲಿ ಕಾಯ್ದಿರಿಸುವ ಠೇವಣಿಯಿಂದ ಬರುವ ಬಡ್ಡಿಯ ಹಣದ ಮೂಲಕ ನಿವೃತ್ತ ನೌಕರರಿಗೆ ಪಿಂಚಣಿ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಉಪಾಧ್ಯಕ್ಷ ಹೆ ಚ್.ಬಿ.ಮಂಜುನಾಥ್, ನಿರ್ದೇಶಕರಾದ ಟಿ.ಮಹಂತೇಶ್, ಎಸ್.ಆರ್.ಗಿ ರೀಶ್, ನಾಗರೆಡ್ಡಿ, ಪಿ.ರಾಜು, ಎಂ.ನಿಶಾನಿ ಜಯಣ್ಣ, ಡಿ.ಎಸ್.ಶಶಿಧರ, ಪಿ. ವಿನೋದಾಸ್ವಾಮಿ, ಕೆ.ಜಗಣ್ಣ, ಹೆಚ್.ಎಂ.ದ್ಯಾಮಣ್ಣ, ಪಿ.ತಿಪ್ಪೇಸ್ವಾಮಿ, ಟಿ. ಮಹಂತೇಶ್, ಡಾ.ಕೆ.ಅನಂತ್, ಓ.ಮಂಜುನಾಥ್, ಸಹಕಾರ ಸಂಘಗಳ ಉಪನಿಬಂಧಕ ದಿಲೀಪ್ ಕುಮಾರ್ ಸೇರಿದಂತೆ ಮತ್ತಿತರರು ಇದ್ದರು.
ಚಿತ್ರದುರ್ಗ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಾಸಕ ಟಿ.ರಘುಮೂರ್ತಿ ಅವಿರೋಧ ಆಯ್ಕೆ



