ನವಾಡ (ಬಿಹಾರ): ಇಂದು ಪ್ರಾರಂಭಗೊAಡಿರುವ ಬಿಹಾರ ವಿಧಾನಸಭಾ ಚುನಾವಣೆಯ ಎರಡನೆ ಮತ್ತು ಅಂತಿಮ ಹಂತದ ಮತದಾನದ ವೇಳೆ ನವಾಡ ಜಿಲ್ಲೆಯ ವಾರಿಸಾಲಿಗಂಜ್ ಪ್ರದೇಶದಲ್ಲಿ ವಿವಿಧ ರಾಜಕೀಯ ಪಕ್ಷಗಳ ಬೆಂಬಲಿಗರ ನಡುವೆ ಸಣ್ಣ ಪ್ರಮಾಣದ ಘರ್ಷಣೆ ನಡೆದಿದೆ ಎಂದು ವರದಿಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ನವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಧೀಮನ್, “ಮತಗಟ್ಟೆಯಿಂದ ಸುಮಾರು ೧.೫ ಕಿಮೀ ದೂರದಲ್ಲಿ ವಿವಿಧ ರಾಜಕೀಯ ಪಕ್ಷಗಳ ಬೆಂಬಲಿಗರ ನಡುವೆ ಸಣ್ಣ ಪ್ರಮಾಣದ ಘರ್ಷಣೆ ನಡೆದಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸಂಬAಧಿಸಿದ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ, ಘಟನೆಯ ಕುರಿತು ಪರಿಶೀಲನೆ ನಡೆಸಿದ್ದಾರೆ. ಆ ಪ್ರದೇಶವು ಸಂಪೂರ್ಣವಾಗಿ ನಿಯಂತ್ರಣದಲ್ಲಿದ್ದು, ಮತದಾನ ಸುಗಮವಾಗಿ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.
ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ವಾಹನವೊಂದು ಹಾನಿಗೀಡಾಗಿದೆ ಎಂಬ ವದಂತಿಗಳನ್ನು ಅಲ್ಲಗಳೆದಿರುವ ಅವರು, ಈ ವದಂತಿಗಳು ಸಂಪೂರ್ಣ ನಿರಾಧಾರವಾಗಿದ್ದು, ಈ ಘಟನೆಯಲ್ಲಿ ಖಾಸಗಿ ವಾಹನವೊಂದು ಹಾನಿಗೀಡಾಗಿದೆ. ಈ ವಾಹನಕ್ಕೂ ಚುನಾವಣಾ ಕರ್ತವ್ಯಕ್ಕೂ ಯಾವುದೇ ಸಂಬAಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.



