ಬೆಂಗಳೂರು: ಬೆಂಗಳೂರು ಬೃಹತ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಬೆಂಗಳೂರು ನಗರದಾದ್ಯಂತ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಹಮ್ಮಿಕೊಂಡಿದೆ. ಜಯನಗರದ ಅಶೋಕ ಪಿಲ್ಲರ್ ಸಮೀಪದಿಂದ ಇಂದು ಬೆಳಗ್ಗೆ ಕಾರ್ಯಾಚರಣೆ ಆರಂಭಗೊಂಡಿದ್ದು, ಅಂಗಡಿಗಳು ಮತ್ತು ಕಟ್ಟಡ ಕಾಮಗಾರಿಗೆ ಸಂಬಂಧಿಸಿದ ವಸ್ತುಗಳಿಂದ ಒತ್ತುವರಿ ಮಾಡಲಾಗಿದ್ದ ಫುಟ್ಪಾತ್ಗಳನ್ನು ತೆರವುಗೊಳಿಸಲಾಗುತ್ತಿದೆ. ಬೆಳಗ್ಗೆ 9:30ಕ್ಕೆ ಶುರುವಾದ ಈ ಕಾರ್ಯಾಚರಣೆಗೆ ಜೆಸಿಬಿಗಳನ್ನು ಬಳಸಲಾಗುತ್ತಿದೆ. ಸ್ಥಳೀಯ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸರ ಬೆಂಗಾವಲು ಸಹ ಒದಗಿಸಲಾಗಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂಬರ್ 153 ರಲ್ಲಿ, ಅಶೋಕ ಪಿಲ್ಲರ್ನಿಂದ ಮಾಧವನ್ ಪಾರ್ಕ್ವರೆಗೆ ಈ ತೆರವು ನಡೆಯುತ್ತಿದೆ. ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಎಲ್ಲ ಒತ್ತುವರಿಗಳನ್ನು ತೆರವುಗೊಳಿಸಿ, ಭವಿಷ್ಯದಲ್ಲಿ ಮತ್ತೆ ಒತ್ತುವರಿ ಮಾಡದಂತೆ ನಿಗಾ ವಹಿಸಲು ಜಿಬಿಎ ಎಚ್ಚರಿಕೆ ವಹಿಸುತ್ತಿದೆ.ನಗರದ ಎಲ್ಲಾ ಕಡೆ ಪಾದಚಾರಿ ರಸ್ತೆಗಳಲ್ಲಿ ಸಣ್ಣಪುಟ್ಟ ಅಂಗಡಿ ಸೇರಿದಂತೆ ಹೋಟೆಲ್ ಹಾಗು ಇತರೆ ಅಂಗಡಿ ಗಳನ್ನು ನಡೆಸುತ್ತಿದ್ದವರನ್ನು ಎತ್ತಂಗಡಿ ಮಾಡಲಾಗಿದೆ. ಹೋಟೆಲ್ ಮುಂಭಾಗದಲ್ಲಿ ಟೀ, ಕಾಫಿ, ಇಡುವ ಲೋಟ, ತಿಂಡಿ ತಟ್ಟೆಗಳಿಂದ



