ಬೆಂಗಳೂರು: ರಾಜ್ಯದಲ್ಲಿ ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಆಗಲಿದೆ ಎಂಬುದು ಜಗಜ್ಜಾಹೀರಾಗಿರುವ ವಿಚಾರ. ಇದರಲ್ಲಿ ಎರಡು ಅನುಮಾನವಿಲ್ಲ. ಹೀಗಾಗಿಯೇ ಸಿಎಂ ಸಿದ್ಧರಾಮಯ್ಯ ಆತಂಕಕ್ಕೊಳ ಗಾಗಿದ್ದಾರೆ. ಪ್ರಚಾರದ ವೇದಿಕೆಯಲ್ಲಿ ನನಗೆ ವರುಣಾ ವಿಧಾನಸಭಾ ಕ್ಷೇತ್ರದಿಂದ 60 ಸಾವಿರ ಲೀಡ್ ಕೊಡಬೇಕು.
ಆಗ ಮಾತ್ರ ನಾನು ಗಟ್ಟಿಯಾಗಿ ನಿಲ್ಲಬಹುದು ಎಂದಿದ್ದಾರೆ.ಎಂದು ಜೆಡಿಎಸ್ನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ.ಇಂದು ಅಮಿತ್ ಶಾ ಅವರ ಜೊತೆಗಿನ ಬ್ರೇಕ್ಫಾಸ್ಟ್ ಮೀಟಿಂಗ್ಗೆ ಆಗಮಿಸಿದ ಜಿ.ಟಿ. ದೇವೇಗೌಡ, ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿದ್ದು, ಸಿಎಂ ಸಿದ್ಧರಾಮಯ್ಯರಿಗೆ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಬಗ್ಗೆ ಮಾಹಿತಿ ಇದೆ ಎಂದಿದ್ದಾರೆ.