ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರು ಮಹಾನಗರ ಪ್ರದೇಶದಲ್ಲಿ ಸಂಚಾರ ಮಾಡುತ್ತಿದ್ದಾರೆ.ಇಂದು ಬೆಳಿಗ್ಗೆ 11.45ರ ಸುಮಾರಿಗೆ ತಮ್ಮ ಗೃಹ ಕಚೇರಿ ಕೃಷ್ಣಾದಿಂದ ಬಿಎಂಟಿಸಿ ವೋಲ್ವೋ ಬಸ್ನಲ್ಲಿ ಬೆಂಗಳೂರು ಮಹಾನಗರ ಸಂಚಾರ ಆರಂಭಿಸಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಬಿಡಿಎ, ಬಿಬಿಎಂಪಿ, ಬಿಡಬ್ಲ್ಯೂ ಎಸ್ಎಸ್ಬಿ ಅಧಿಕಾರಿಗಳು ಸಹ ಮುಖ್ಯಮಂತ್ರಿಯವರ ಸಂಚಾರ ಸಮಯದಲ್ಲಿ ಪಾಲ್ಗೊಂಡಿದ್ದಾರೆ.ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಉಂಟಾದ ಹಾನಿ ಪ್ರದೇಶಗಳಿಗೆ ಮುಖ್ಯಮಂತ್ರಿಯವರು ಭೇಟಿ ನೀಡಲಿದ್ದಾರೆ.
ಮೊದಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಭೇಟಿ ಅಲ್ಲಿ ನಡೆಯುತ್ತಿರುವ ಕಾಮಗಾರಿಯ ವೀಕ್ಷಣೆ ಮಾಡಿದ್ದಾರೆ.ಆದಾದ ನಂತರ ನಾಯಂಡಹಳ್ಳಿ ಜಂಕ್ಷನ್, ಹೊರ ವರ್ತುಲ ರಸ್ತೆ, ಮುಖಾಂತರ ಕನಕಪುರ ರಸ್ತೆ, ಬನಶಂಕರಿ ಜಂಕ್ಷನ್, ಜೆಪಿನಗರ, ರಾಗಿಗುಡ್ಡ ಜಂಕ್ಷನ್ ಪ್ರದೇಶದಲ್ಲಿ ಪರಿಶೀಲನೆ ನಡೆಸಲಿದ್ದಾರೆ.
ವೆಗಾ ಸಿಟಿ ಮಾಲ್, ಜಂಕ್ಷನ್ ಬನ್ನೇರುಘಟ್ಟ ರಸ್ತೆ, ಸೇರಿದಂತೆ ಸಂಜೆ ಸುಮಾರಿನವರೆಗೂ ಮುಖ್ಯಮಂತ್ರಿಯವರು ಬೆಂಗಳೂರು ನಗರ ಸಂಚಾರ ನಡೆಸಿ ಮುಂಬರುವ ಮಳೆಗಾಲದ ಸಮಯದಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ರೀತಿಯ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಲು ಸೂಚನೆ ನೀಡಲಿದ್ದಾರೆ ಎಂದು ಹೇಳಲಾಗಿದೆ.