This is the title of the web page
This is the title of the web page

ಶಿಗ್ಗಾವಿಯಿಂದಲೇ ಸ್ಪರ್ಧೆ ಸಿಎಂ ಸ್ಪಷ್ಟನೆ

ಬೆಂಗಳೂರು: ತಾವು ಇದುವರೆಗೂ ಪ್ರತಿನಿಧಿಸುತ್ತಿರುವ ಶಿಗ್ಗಾವಿ ಕ್ಷೇತ್ರದಿಂದಲೇ ಈ ಬಾರಿಯೂ ಸ್ಪರ್ಧೆ ಮಾಡಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಬೊಮ್ಮಾಯಿ ಕ್ಷೇತ್ರ ಬದಲಾವಣೆ ಮಾಡುತ್ತಾರೆ ಎಂದ ಕೇಳಿಬರುತ್ತಿದ್ದ ವದಂತಿಗಳಿಗೆ ತೆರೆ ಎಳೆದಿರುವ ಮುಖ್ಯಮಂತ್ರಿಯವರು ಶಿಗ್ಗಾವಿಯಿಂದಲೇ ತಾವು ಸ್ಪರ್ಧಿಸಲಿದ್ದು ತಾವು ಮಾಡಿರುವ ಅಭಿವೃದ್ಧಿ ಕಾರ್ಯಗಳ ಸಾಧನೆಯ ಪಟ್ಟಿ ಹಿಡಿದು ಮತಯಾಚಿಸುವುದಾಗಿ ಹೇಳಿದ್ದಾರೆ.